More

    ಕೋಳಿ ಸಾಕಾಣಿಕೆ ಮಾಡಲು ಉಚಿತ ತರಬೇತಿ: ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆದ್ಯತೆ

    ಮಂಡ್ಯ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆ ಕುರಿತ 10 ದಿನದ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
    18 ರಿಂದ 45 ವರ್ಷ ವಯೋಮಾನದ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ.31 ಕೊನೆಯ ದಿನವಾಗಿದೆ.
    ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಮಾಹಿತಿಗಾಗಿ ಬೆಂಗಳೂರಿನ ನೆಲಮಂಗಲ ತಾಲೂಕು ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯ ಮೊ.ಸಂ 9380162042 ಅಥವಾ 9740982585 ಯನ್ನು ಸಂಪರ್ಕಿಸಬಹುದಾಗಿದೆ ಎಂದು ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts