More

    ಕಾನೂನು ಪದವೀಧರರಿಗೆ ಉಚಿತ ತರಬೇತಿ: ಜು.31ರೊಳಗೆ ಅರ್ಜಿ ಸಲ್ಲಿಸಿ

    ಮಂಡ್ಯ: ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ 2023-24ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವತಿಯಿಂದ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
    ಅರ್ಹರು ಜು.31ರೊಳಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ವಕೀಲರಾಗಿ ಕಾರ್ಯನಿರ್ವಹಿಸಲು ನಿಗದಿಪಡಿಸಲಾದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷ ಅವಧಿಯ ಒಳಗಿರುವವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂ.ಸಂ 08232-220835 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts