More

    ಕೋವಿಡ್‌ಗೆ ಸಂಪೂರ್ಣ ಉಚಿತ ಚಿಕಿತ್ಸೆ

    ಉಡುಪಿ: ಕೋವಿಡ್ 19 ಪೀಡಿತರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಎಪಿಎಲ್, ಬಿಪಿಎಲ್ ಬೇಧವಿಲ್ಲದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ರೋಗಿಗಳು ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜಿಲ್ಲಾ ಆರೋಗ್ಯ ಮತು ್ತಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದರು.

    ಮಂಗಳವಾರ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಿದ್ದರು. ಕೋವಿಡ್ ಬೇಗ ಗುರುತಿಸಿದಲ್ಲಿ ಹರಡುವುದನ್ನು ತಡೆಯಲು ಸಾಧ್ಯವಿದೆ. ಅದಕ್ಕಾಗಿ ಆ್ಯಂಟಿಜಿನ್ ಟೆಸ್ಟ್ ಮಾಡಲಾಗುತ್ತಿದೆ ಎಂದರು. ಪಾಸಿಟಿವ್ ಬಂದ ವ್ಯಕ್ತಿ ಜಿಲ್ಲಾಡಳಿತದ ಶಿಫಾರಸ್ಸಿನೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಸಂಪೂರ್ಣ ಉಚಿತ ಚಿಕಿತ್ಸೆ ದೊರೆಯುತ್ತದೆ. ಸಾಮಾನ್ಯ ವಾರ್ಡ್ ಬಿಟ್ಟು ಹೆಚ್ಚಿನ ಸೌಲಭ್ಯಗಳನ್ನು ಪಡೆದಲ್ಲಿ, ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಬಿಲ್ ಭರಿಸಬೇಕಾಗುತ್ತದೆ ಎಂದರು.
    ಕೋವಿಡ್ ಪರೀಕ್ಷೆ, ಚಿಕಿತ್ಸೆ ವಿಧಾನಗಳ ಕುರಿತ ವಿವರಗಳ ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯಿತಿ ಮೂಲಕ ಪ್ರತಿ ಮನೆ ಮನೆಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಪ್ರೀತಿ ಗೆಹ್ಲೋಟ್ ತಿಳಿಸಿದರು.

    ಸದಸ್ಯ ಜನಾರ್ದನ ತೋನ್ಸೆ ಮಾತನಾಡಿ, ಮಂಗಳೂರಿನ ಐಟಿ ಕಚೇರಿಯನ್ನು ಗೋವಾ ರಾಜ್ಯಕ್ಕೆ ಸ್ಥಳಾಂತರಿಸುವುದರಿಂದ ಅವಿಭಜಿತ ಜಿಲ್ಲೆಯ ಸುಮಾರು 4 ಲಕ್ಷಕ್ಕೂ ಅಧಿಕ ತೆರಿಗೆದಾರರಿಗೆ ಅನನುಕೂಲವಾಗಲಿದ್ದು, ಈ ಆದೇಶವನ್ನು ಹಿಂಪಡೆಯುವ ಕುರಿತು ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.

    ಸದಸ್ಯೆ ಜ್ಯೋತಿ ಹರೀಶ್, ಇಂತಹ ಅಪಾಯಕಾರಿ ಮರಗಳನ್ನು ಮಳೆಗಾಲದ ಮುಂಚೆಯೇ ಗುರುತಿಸಿ ಕಟಾವು ಮಾಡಬೇಕು ಎಂದರು.
    ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಮಾತನಾಡಿ, ಅರಣ್ಯ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕುರಿತು ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
    ಪಡುಬಿದ್ರಿಯಲ್ಲಿ ರಸ್ತೆ ಮತ್ತು ಸೇತುವೆ ಕಾಮಗಾರಿ ವಿಳಂಬ ಕುರಿತು ಸದಸ್ಯ ಶಶಿಕಾಂತ ಪಡುಬಿದ್ರಿ ಹಾಗೂ ಸದಸ್ಯೆ ಶಿಲ್ಪಾ ಸುವರ್ಣ ಆಕ್ಷೇಪ ವ್ಯಕ್ತಪಡಿಸಿದರು. ಗೀತಾಂಜಲಿ ಸುವರ್ಣ ಮಾತನಾಡಿ, ಕಾಪು ಸಮೀಪ ಅಪಘಾತ ಸಂಭವಿಸಿ ಯುವತಿ ಸಾವನ್ನಪ್ಪಿದ್ದು, ರಸ್ತೆಯಲ್ಲಿ ನಿಂತ ನೀರು ಕಾರಿಗೆ ಎರಚಲ್ಪಟ್ಟು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ನೀರು ನಿಲ್ಲದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
    ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

    ಡಯಾಲಿಸಿಸ್ ಹೆಚ್ಚಿನ ಬೇಡಿಕೆ: ಜಿಲ್ಲೆಯಲ್ಲಿ ಡಯಾಲಿಸಿಸ್ ಹೆಚ್ಚಿನ ಬೇಡಿಕೆ ಇದ್ದು, ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಯಂತ್ರಗಳನ್ನು ಅಳವಡಿಸುವಂತೆ ಕೃಷಿ ಮತ್ತು ಕೈಗಾರಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹೇಳಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಬೈಂದೂರು ಮತ್ತು ಬ್ರಹ್ಮಾವರ, ಹೆಬ್ರಿ, ಕಾಪು ಆಸ್ಪತ್ರೆಯಲ್ಲಿ ಹೊಸ ಯಂತ್ರ ಅಳವಡಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts