ಸಖಿ ಒನ್‌ಸ್ಟಾಪ್‌ಗೆ ಉಚಿತ ವಾಹನ ವ್ಯವಸ್ಥೆ

sakhi

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಉಚಿತ ವಾಹನ ಸೌಲಭ್ಯ ಒದಗಿಸಲಾಗುತ್ತಿದೆ. ನೂತನ ವಾಹನ ವ್ಯವಸ್ಥೆಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಜಿಪಂ ಸಿಇಒ ಎನ್.ಹೇಮಂತ್, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಮುಂತಾದವರು ಈ ಸಂದರ್ಭದಲ್ಲಿದ್ದರು.
ಕುಟುಂಬ, ಸಮುದಾಯ ಕೆಲಸದ ಸ್ಥಳಗಳು, ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ ಹಿಂಸೆ ಅನುಭವಿಸುತ್ತಿರುವ ಮಹಿಳೆಯರಿಗೆ ಸಕಾಲಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿ ದೇಶಾದ್ಯಂತ 24*7 ಕಾರ್ಯನಿರ್ವಹಿಸುವ ಸಖಿ ಒನ್ ಸ್ಟಾಪ್ ಸೆಂಟರ್ ಆರಂಭಿಸಲಾಗಿದೆ. ಶಿವಮೊಗ್ಗ ಮತ್ತು ಸಾಗರದಲ್ಲಿ ಈ ಸೆಂಟರ್‌ಗಳಿವೆ.
ಶಿವಮೊಗ್ಗದಲ್ಲಿ ಆಲ್ಕೊಳ 100 ಅಡಿ ರಸ್ತೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಕೀರ್ಣದಲ್ಲಿ ಸಾಗರ ಬಿಎಚ್ ರಸ್ತೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಅವರಣದಲ್ಲಿ ಸಖಿ ಒನ್ ಸ್ಟಪ್ ಇದೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ಇಲ್ಲಿ ಆಪ್ತ ಸಮಾಲೋಚನೆ, ಪೊಲೀಸ್ ನೆರವು, ಕಾನೂನು ನೆರವು, ವೈದ್ಯಕೀಯ ನೆರವು ಮತ್ತು ತಾತ್ಕಾಲಿಕ ಆಶ್ರಯ ಒದಗಿಸಲಾಗುತ್ತದೆ.
ಶಿವಮೊಗ್ಗ ಸಖಿ ಕೇಂದ್ರದಲ್ಲಿ ಒಟ್ಟು 2,095 ಪ್ರಕರಣಗಳು ದಾಖಲಾಗಿದ್ದು, 1846 ಪ್ರಕರಣಗಳಿಗೆ ಕೇಂದ್ರದ ಸೇವೆಗಳನ್ನು ಒದಗಿಸಿ ಮುಕ್ತಾಯಗೊಳಿಸಲಾಗಿದೆ. ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಉಚಿತ ವಾಹನ ಸೌಲಭ್ಯ ಒದಗಿಸಲಾಗುತ್ತಿದ್ದು, ಮಹಿಳಾ ಸಹಾಯವಾಣಿ ಸಂಖ್ಯೆ 181ಕ್ಕೆ ಕರೆ ಮಾಡಿ, ಪ್ರಯೋಜನ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.

Share This Article

ನಿಮ್ಮ ಮಕ್ಕಳಿಗೆ ಪ್ರತಿನಿತ್ಯ ಟೀ ಕೊಡ್ತಿದ್ದೀರಾ? ಹೌದು ಎಂದಾದರೆ ಈ ವಿಚಾರಗಳು ನಿಮಗೆ ತಿಳಿದಿರಲೇಬೇಕು! Tea

Tea : ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು…

ನಿಮಗೆ ದೃಷ್ಟಿ ದೋಷವಾಗಿದ್ರೆ..ನಿಂಬೆ ಹಣ್ಣಿನಿಂದ ಹೀಗೆ ಮಾಡಿದರೆ ಸಾಕು! Drishti Dosha

Drishti Dosha: ಸಾಮಾನ್ಯವಾಗಿ ಕೆಟ್ಟ ದೃಷ್ಟಿ ಬಿದ್ದಿದೆ ಎಂಬ ಪದವನ್ನು ನಾವು ಸಾಮಾನ್ಯವಾಗಿ ಕೇಳುತ್ತಿರುತ್ತೇವೆ. ಮನೆ ವ್ಯವಹಾರ,…

ನೀವು ಈ ದಿನಾಂಕಗಳಲ್ಲಿ ಹುಟ್ಟಿದ್ದೀರಾ? ಹಾಗಾದರೆ 2025ರಲ್ಲಿ ನಿಮಗೆ ಅದೃಷ್ಟೋ ಅದೃಷ್ಟ… ಹಣದ ಸುಗ್ಗಿ ಗ್ಯಾರಂಟಿ! Numerology

Numerology : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…