More

    ಸ್ವಾತಂತ್ರ್ಯ ಹೋರಾಟದ ಬೆನ್ನೆಲುಬಾಗಿದ್ದ ಗಾಂಧೀಜಿ – ಡಿಸಿ ಎಸ್.ವಿಕಾಸ್ ಕಿಶೋರ್ ಅಭಿಮತ

    ಕೊಪ್ಪಳ: ಮಹಾತ್ಮ ಗಾಂಧೀಜಿ ಅಹಿಂಸಾ ಮಾರ್ಗದ ಮೂಲಕ ಎಲ್ಲರನ್ನು ಒಗ್ಗೂಡಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು ಎಂದು ಡಿಸಿ ಎಸ್.ವಿಕಾಸ್ ಕಿಶೋರ್ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಮಾತನಾಡಿದರು.

    ಗಾಂಧೀಜಿಯವರು ಸತ್ಯ, ಅಹಿಂಸಾ ಮಾರ್ಗ ಅನುಸರಿಸಿ ಎಲ್ಲರಲ್ಲೂ ಸ್ವಾತಂತ್ರ್ಯದ ಬಗ್ಗೆ ಕಿಚ್ಚು ಹೆಚ್ಚಿಸಿದರು. ಹಗಲಿರುಳು ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಅಹಿಂಸಾ ತತ್ವವನ್ನು ಇಂದು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಲಾಲ್‌ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕತೆಯಿಂದಲೇ ಹೆಸರಾದವರು. ದೇಶದ ಪ್ರಧಾನಿಯಾದರೂ ಸರಳ ಜೀವನ ನಡೆಸಿದವರು. ಇಂಥ ಮಹನೀಯರ ಬಗ್ಗೆ ನಾವೆಲ್ಲ ಅರಿತುಕೊಳ್ಳಬೇಕು ಎಂದರು.

    ಎಡಿಸಿ ಎಂ.ಪಿ.ಮಾರುತಿ, ಎಸಿ ನಾರಯಣರಡ್ಡಿ ಕನಕರಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts