More

    ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ

    ಹೊಸಪೇಟೆ: ಅಜಾದಿ ಕಾ ಅಮೃತ್ ಮಹೋತ್ಸವ ನಿಮಿತ್ತ ಆ.15 ರಂದು ಸಂಜೆ 6 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ತೀರ್ಮಾನಿಸಿದೆ.

    ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅಧ್ಯಕ್ಷತೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಈ ಹೋರಾಟದಲ್ಲಿ ವಿಜಯನಗರ ಜಿಲ್ಲೆ ವಹಿಸಿದ ಪಾತ್ರವನ್ನು ಆಧಾರವಾಗಿಟ್ಟುಕೊಂಡು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ಪಿಂಚಣಿ ಪಡೆಯುತ್ತಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ನಿರ್ಧರಿಸಲಾಯಿತು.

    ವನ್ಯಜೀವಿಗಳ ಕುರಿತು ಕಾರ್ಯಾಗಾರ: ಪ್ರವಾಸಿ ಮಾರ್ಗದರ್ಶಿಗಳು ವಿವಿಧೆಡೆಯಿಂದ ಆಗಮಿಸುವ ಪ್ರವಾಸಿಗರಿಗೆ ವಿಶ್ವಪಾರಂಪರಿಕ ತಾಣವಾದ ಹಂಪಿಯ ಸ್ಮಾರಕಗಳನ್ನು ತೋರಿಸಿ ಅದರ ಬಗ್ಗೆ ವಿವರಣೆ ನೀಡುತ್ತಾರೆ. ವಿಜಯನಗರ ಜಿಲ್ಲೆ ಎಂದಾಕ್ಷಣ ಕೇವಲ ಹಂಪಿ ಮಾತ್ರವಲ್ಲ, ದರೋಜಿ ಕರಡಿ ಧಾಮ, ನೀರು ನಾಯಿಗಳು, ಕಮಲಾಪುರ ಝೂ, ಗುಡೇಕೋಟೆ ಕರಡಿಧಾಮ, ಅಂಕಸಮುದ್ರ ಪಕ್ಷಿಧಾಮ ಮತ್ತಿತರ ಸ್ಥಳಗಳೂ ಇವೆ ಎಂಬುದನ್ನು ಪ್ರವಾಸಿಗರಿಗೆ ಮನದಟ್ಟು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ, ಪ್ರವಾಸಿ ಮಾರ್ಗದರ್ಶಿಗಳಿಗಾಗಿ ಕಾರ್ಯಾಗಾರ ಏರ್ಪಡಿಸಲು ತೀರ್ಮಾನಿಸಲಾಯಿತು.

    ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ತಿಪ್ಪೇಸ್ವಾಮಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts