

ಪುಣೆ: ಮಹಾರಾಷ್ಟ್ರದಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಗುಂಪೊಂದು ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ ಮೆರೆಯುತ್ತಿರುವ ಕುರಿತು ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಇನ್ನು ಇದೇ ರೀರಿಯ ಘಟನೆಯೊಂದು ಪುಣೆಯ ಪಿಂಪ್ರಿ-ಚಿಂಚವಾಡದಲ್ಲಿ ಘಟನೆ ನಡೆದಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ 5-6 ಜನರ ಗುಂಪೊಂದು ಮೆಡಿಕಲ್ ಸ್ಟೋರ್ಗೆ ನುಗ್ಗಿ ಅಲ್ಲಿದ್ದ ಸಿಬ್ಬಂದಿ ಮೇಲೆ ಏಕಾಏಕಿ ದಾಳಿ ಮಾಡಲು ಆರಂಭಿಸುತ್ತಾರೆ.
ಇದೇ ವೇಳೆ ಮೆಡಿಕಲ್ ಸ್ಟೋರ್ನ ಮತ್ತೊಬ್ಬ ಸಿಬ್ಬಂದಿ ಮಧ್ಯ ಪ್ರವೇಶಿಸಲು ಯತ್ನಿಸುತ್ತಾರೆ. ಆದರೆ, ಅವರಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳು ನಂತರ ಅಂಗಡಿಯಲ್ಲಿರುವ ಸಾಮಾನುಗಳನ್ನು ಹೊಡೆದು ಹಾಕುತ್ತಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ದುಷ್ಕರ್ಮಿಗಳು ಮೆಡಿಕಲ್ ಸ್ಟೋರ್ನಲ್ಲಿ ದಾಂಧಲೆ ನಡೆಸುವ ಮೊದಲು ಕಾಮ್ಘರ್ ನಗರ ಪ್ರದೇಶದಲ್ಲಿ ಗಾಡಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಈ ರೀತಿಯ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು ಈ ರೀತಿ ಮಾಡುವವರನ್ನು ಕೊಯ್ತಾ ಗ್ಯಾಂಗ್ ಎಂದು ಕರೆಯಲಾಗುತ್ತದೆ. ಇವರು ಮಚ್ಚಿನಿಂದ ದಾಂಧಲೆ ಮಾಡಿ ಹಲ್ಲೆ ನಡೆಸುತ್ತಾ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.