More

    ಕೇಜ್ರಿವಾಲ್‌ಗೆ ಮತ್ತೊಂದು ಸಮನ್ಸ್‌: ಕೋರ್ಟ್‌ ಹೇಳಿದ್ದೇನು?

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ವಿರುದ್ಧ ಇಡಿ ದೆಹಲಿಯ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 16ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಕೋರ್ಟ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಮನ್ಸ್‌ ಜಾರಿ ಮಾಡಿದೆ.

    ಇದನ್ನೂ ಓದಿ: ಚಂದ್ರನ ಮೇಲೆ ‘ಪರಮಾಣು ವಿದ್ಯುತ್ ಸ್ಥಾವರ’ಕ್ಕೆ ರಷ್ಯಾ-ಚೀನಾ ಯೋಜನೆ!

    ಕೇಜ್ರಿವಾಲ್ ಅವರಿಗೆ ಹಲವು ಬಾರಿ ಸಮನ್ಸ್ ಕಳುಹಿಸಿದ್ದರೂ ತನಿಖೆಗೆ ಸಹಕರಿಸುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಹಲವು ಬಾರಿ ಸಮನ್ಸ್‌ ನೀಡಿದ್ದರೂ ಕೇಜ್ರಿವಾಲ್‌ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದಾರೆ ಎಂದು ಇ.ಡಿ ದೆಹಲಿ ಕೋರ್ಟ್‌ಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಹೊಸದಾಗಿ ಕೋರ್ಟ್‌ ಸಮನ್ಸ್‌ ನೀಡಿದೆ. ಕೇಜ್ರಿವಾಲ್ ಅವರಿಗೆ ನೀಡಲಾದ ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದ ಕಾರಣಕ್ಕೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಇ.ಡಿ ಈ ಹಿಂದೆಯೂ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಿತ್ತು.

    ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್ ಕಳುಹಿಸಿರುವ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮತ್ತೊಂದು ಅರ್ಜಿ ಸಲ್ಲಿಸಿದೆ. ಐಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಮತ್ತೆ ಹೊಸ ಅರ್ಜಿಯನ್ನು ಸಲ್ಲಿಸಿದ್ದು, ಈಗಾಗಲೇ 8 ಬಾರಿ ಸಮನ್ಸ್ ಕಳುಹಿಸಿದ್ದರೂ ಅವುಗಳನ್ನು ಪರಿಗಣಿಸಿಲ್ಲ ಎಂದು ಆರೋಪಿಸಿದೆ.

    ಈ ಪ್ರಕರಣದ ವಿಚಾರಣೆಯನ್ನು ಇದೇ 16ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಕೇಜ್ರಿವಾಲ್ ತಮಗೆ ಕಳುಹಿಸಿರುವ ಈ ಎಲ್ಲ ಎಂಟು ಇ.ಡಿ ಸಮನ್ಸ್‌ಗಳನ್ನು ʼಕಾನೂನುಬಾಹಿರʼ ಎಂದು ಕರೆದಿದ್ದಾರೆ ಮತ್ತು ಮಾರ್ಚ್ 12ರ ನಂತರ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣಗೆ ಹಾಜರಾಗುವುದಾಗಿ ತಿಳಿಸಿದ್ದರು. ಆದರೆ ಇದಕ್ಕೆ ಇ.ಡಿ ಒಪ್ಪಿಗೆ ಸೂಚಿಸಿಲ್ಲ. ನೇರವಾಗಿ ಹಾಜರಾಗುವಂತೆ ಕೇಜ್ರಿವಾಲ್‌ ಅವರಿಗೆ ಸೂಚಿಸಿದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ಹೇಳಿದೆ.

    ಪ್ರಿಯಕರನ ಜೊತೆ ಹಸೆಮಣೆ ಏರಲು ಸಜ್ಜಾದ’ಗೂಗ್ಲಿ’ನಟಿ: ಮದುವೆ ಯಾವಾಗ ಗೊತ್ತೇ? ಇಲ್ಲಿದೆ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts