ಮಣಿಪುರದಲ್ಲಿ ಮತ್ತೊಮ್ಮೆ ಭುಗಿಲೆದ್ದ ಹಿಂಸಾಚಾರ; ಮನೆಗಳಿಗೆ ಬೆಂಕಿ ಹಚ್ಚಿ ಗುಂಡು ಹಾರಿಸಿದ ದುಷ್ಕರ್ಮಿಗಳು

Manipur Violence
Published on

ಇಂಫಾಲ್: ಗಲಭೆ ಪೀಡಿತ ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದಿದ್ದು, ಎರಡು ಮನೆ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಉದ್ರಿಕ್ತರ ಗುಂಪು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ಮಣಿಪುರದ ಪಶ್ಚಿಮ ಇಂಫಾಲ್​ ಜಿಲ್ಲೆಯ ನ್ಯೂ ಕೀಥೆಲ್ಮನ್ಬಿ ಪಟ್ಸೋಯಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 10 ಘಂಟೆ ಸುಮಾರಿಗೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Manipur Violence

ಘಟನೆಯ ನಂತರ ಮೈತಿ ಮಹಿಳೆಯರ ಗುಂಪೊಂದು ಪ್ರದೇಶದಲ್ಲಿ ಜಮಾಯಿಸಿತು. ಆದರೆ ಭದ್ರತಾ ಪಡೆಗಳು ಅವರು ಮತ್ತಷ್ಟು ಮುಂದುವರಿಯದಂತೆ ತಡೆದಿದ್ದಾರೆ.  ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 3ರಮದು ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೇ ಆರಂಭವಾದ ಜನಾಂಗೀಯ ಘರ್ಷಣೆಯಲ್ಲಿ ಈವರೆಗೆ 180ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net