More

    ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷರಿಗೆ ಪೊಲೀಸರಿಂದ ಕಪಾಳಮೋಕ್ಷ!?; ಠಾಣೆ ಎದುರು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

    ನೆಲಮಂಗಲ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಿಗೆ ಪೊಲೀಸ್​ ಸಬ್​​ ಇನ್​ಸ್ಪೆಕ್ಟರ್​ ಒಬ್ಬರು ಕೆನ್ನೆಗೆ ಹೊಡೆದಿದ್ದಾರೆ ಎನ್ನಲಾಗಿದ್ದು, ಪೊಲೀಸ್ ಠಾಣೆ ಮುಂದೆ ವಿವಿಧ ಕನ್ನಡಪರ ಸಂಘಟನೆಗಳವರು ಪ್ರತಿಭಟನೆ ನಡೆಸಿದ್ದಾರೆ. ಮಾತ್ರವಲ್ಲ ಪೊಲೀಸರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

    ಪ್ರವೀಣ್​ಕುಮಾರ್​ ಶೆಟ್ಟಿ ಅವರ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಉಮೇಶ್ ಗೌಡ ಅವರಿಗೆ ನೆಲಮಂಗಲ ಪಟ್ಟಣ ಠಾಣೆಯ ಸಬ್​ ಇನ್​ಸ್ಪೆಕ್ಟರ್ ಸುರೇಶ್​ ಅವರು ಕೆನ್ನೆಗೆ ಬಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಇದನ್ನೂ ಓದಿ: ರೊಚ್ಚಿಗೆದ್ದು ಪೊಲೀಸರನ್ನೇ ಥಳಿಸಿದ ಸಾರ್ವಜನಿಕರು; ಅಡ್ಡಗಟ್ಟಿದ ಸಂಚಾರ ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಬಿದ್ದ ಬೈಕ್ ಸವಾರ ಸಾವು

    ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಮಾತನಾಡಿಸಲು ಪೊಲೀಸರ ಅನುಮತಿ ಪಡೆಯದೆ ಒಳಪ್ರವೇಶಿಸಿದ್ದರು ಎಂಬ ಕಾರಣಕ್ಕೆ ಘರ್ಷಣೆ ಉಂಟಾಗಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಗ್ವಾದ ವಿಕೋಪಕ್ಕೆ ತೆರಳಿ ಕಪಾಳಮೋಕ್ಷ ಮಾಡಲಾಗಿದೆ ಎಂದು ಕರವೇ ಮುಖಂಡರು ಆರೋಪಿಸಿದ್ದಾರೆ.

    ಕಪಾಳಮೋಕ್ಷ ಪ್ರಕರಣದ ಸುದ್ದಿ ಹರಡುತ್ತಿದ್ದಂತೆ ಠಾಣೆ ಬಳಿ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಮುಖಂಡರು ಜಮಾಯಿಸಿದ್ದು, ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಸದ್ಯ ಸಂಧಾನ ಯತ್ನ ನಡೆಯುತ್ತಿದೆ.

    ಇದನ್ನೂ ಓದಿ: ಪೊಲೀಸರ ವಿರುದ್ಧ ಉದ್ರಿಕ್ತರಾದ ಜನರು; ಆರಕ್ಷಕರಿಂದ ತಪ್ಪಿಸಿಕೊಳ್ಳುವಾಗ ಬೈಕ್​ನಿಂದ ಬಿದ್ದ ತಾಯಿ-ಮಗನಿಗೆ ಗಾಯ…

    ಕನ್ನಡಪರ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪೊಲೀಸರು ಈ ರೀತಿ ಹಲ್ಲೆ ನಡೆಸಬಾರದಿತ್ತು. ಈ ವಿಚಾರದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುತ್ತೇವೆ. ಪಿಎಸ್‌ಐ ಸುರೇಶ್ ಮೇಲೆ ಸೂಕ್ತ ಕ್ರಮಕೈಗೊಂಡು ಅಮಾನತು ಪಡಿಸುವಂತೆ ಒತ್ತಾಯಿಸುತ್ತೇವೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ.
    | ಪ್ರವೀಣ್​ಕುಮಾರ್​ ಶೆಟ್ಟಿ ಕರ್ನಾಟಕ ರಕ್ಷಣಾ ವೇದಿಕೆ

    ಬೆಚ್ಚಿಬೀಳಿಸುವಂತಿದೆ ಬೆಂಗಳೂರಿನಲ್ಲಿ ಕರೊನಾ ಸೋಂಕಿನ ಪ್ರಮಾಣ!; ಇಂದು ಇದುವರೆಗಿನ ಗರಿಷ್ಠ ಪ್ರಕರಣ ದಾಖಲು..

    ಕೊನೆಗೂ 20 ವರ್ಷಗಳ ಬಳಿಕ ಜೈಲಿನಿಂದ ಬಿಡುಗಡೆ ಆದ; ವಾಪಸ್ ಬರುವಷ್ಟರಲ್ಲಿ ಹೆಂಡ್ತಿ, ಮಗ, ಅಮ್ಮ, ಇಬ್ಬರು ಸೋದರರೂ ಇರಲಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts