18 C
Bangalore
Friday, December 6, 2019

16ರಿಂದ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಳಗಾವಿ: ಸ್ವಾಮಿ ವಿವೇಕಾನಂದರು ಷಿಕಾಗೋದಲ್ಲಿ ಮಾಡಿದ್ದ ಐತಿಹಾಸಿಕ ಭಾಷಣದ 125ನೇ ವರ್ಷಾಚರಣೆ ಅಂಗವಾಗಿ ಯುವಾ ಬ್ರಿಗೇಡ್ ಹಾಗೂ ಸಹೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ ರಾಷ್ಟ್ರಪ್ರಜ್ಞೆಯ ಪುನರ್ ಜಾಗೃತಿಗಾಗಿ ‘ಮತ್ತೊಮ್ಮೆ ದಿಗ್ವಿಜಯ’ ರಥಯಾತ್ರೆ ಆಯೋಜಿಸಲಾಗಿದೆ ಎಂದು ಯುವಾ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಅ.16ರಂದು ಅಥಣಿಯಲ್ಲಿ ಶೋಭಾಯಾತ್ರೆ, ಮೋಳೆಯಲ್ಲಿ ರಥಯಾತ್ರೆಗೆ ಸ್ವಾಗತ, ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಶೋಭಾಯಾತ್ರೆ ಮತ್ತು ಬಹಿರಂಗ ವೇದಿಕೆ ಕಾರ್ಯಕ್ರಮ ನಡೆಯಲಿದೆ.

17ರಂದು ಬೆಳಗ್ಗೆ ಮುಗಳಖೋಡದಲ್ಲಿ ಶೋಭಾಯಾತ್ರೆ, ಗುರ್ಲಾಪುರ, ಕಂಕಣವಾಡಿ, ತುಕ್ಕಾನಟ್ಟಿ ಹಾಗೂ ಗೋಕಾಕದಲ್ಲಿ ಶೋಭಾಯಾತ್ರೆ ಮತ್ತು ಬಹಿರಂಗ ಕಾರ್ಯಕ್ರಮ, ನಾಗನೂರ ಮತ್ತು ಕಲ್ಲೋಳಿ ಪಟ್ಟಣದಲ್ಲಿ ರಥಕ್ಕೆ ಸ್ವಾಗತ ಜರುಗಲಿದೆ. 18ರಂದು ಶಿಂದಿಕುರಬೇಟ, ಜಾಗನೂರು ಮತ್ತು ಕಬ್ಬೂರಿನಲ್ಲಿ ಶೋಭಾಯಾತ್ರೆ, ಘಟಪ್ರಭಾ ಮತ್ತು ಬೆಲ್ಲದ ಬಾಗೇವಾಡಿಯಲ್ಲಿ ರಥಕ್ಕೆ ಸ್ವಾಗತ ನಡೆಯಲಿದೆ. 19ರಂದು ನಿಡಸೋಸಿ, ಹಿಡಕಲ್ ಡ್ಯಾಂನಲ್ಲಿ ಶೋಭಾಯಾತ್ರೆ, ಬಡಕುಂದ್ರಿ ಕ್ರಾಸ್‌ನಲ್ಲಿ ಬಹಿರಂಗ ಕಾರ್ಯಕ್ರಮ, ಸಂಕೇಶ್ವರ ಮತ್ತು ಹುಕ್ಕೇರಿಯಲ್ಲಿ ಶೋಭಾಯಾತ್ರೆ ಮತ್ತು ಬಹಿರಂಗ ಕಾರ್ಯಕ್ರಮ. 20ರಂದು ಯರಗಟ್ಟಿ, ಕಟಕೋಳದಲ್ಲಿ ರಥಕ್ಕೆ ಸ್ವಾಗತ ಹಾಗೂ ರಾಮದುರ್ಗದಲ್ಲಿ ಶೋಭಾಯಾತ್ರೆ ಮತ್ತು ಬಹಿರಂಗ ಕಾರ್ಯಕ್ರಮ. 21ರಂದು ಶಿರಸಂಗಿಯಲ್ಲಿ ರಥಕ್ಕೆ ಸ್ವಾಗತ. ಸವದತ್ತಿಯಲ್ಲಿ ಶೋಭಾಯಾತ್ರೆ ಜರುಗಲಿದೆ ಎಂದರು.

ಸ್ವಾಮಿ ಆತ್ಮಪ್ರಾಣಾನಂದಜೀ ಮಹಾರಾಜರು, ಬೆಳಗಾವಿಗೆ ಸ್ವಾಮಿ ವಿವೇಕಾನಂದರು ಭೇಟಿ ನೀಡಿ 126 ವರ್ಷಗಳು ಸಂದಿವೆ. ಈ ಸ್ಮರಣೆ ಹಿನ್ನೆಲೆಯಲ್ಲಿ ಆಶ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.20ರಂದು ಸಂಜೆ ವಾರಕರಿ ಭಜನೆ ಜರುಗಲಿದೆ. 21ರಂದು ಸಂಜೆ 6.30ಕ್ಕೆ ಭಜನೆ, 27ರಂದು ಸಿತಾರ್ ವಾದನ ನಡೆಯಲಿದೆ. ಸಂಗೀತಾಸಕ್ತರು ಅತ್ಯಧಿಕ ಸಂಖ್ಯೆಯಲ್ಲಿ ಸೇರುವಂತೆ ಕೋರಿದರು.

ಬೆಳಗಾವಿಯಲ್ಲಿ ಕಾರ್ಯಕ್ರಮ 20ರಂದು

ಅ.20ರಂದು ಬೆಳಗ್ಗೆ 8.30ಕ್ಕೆ ನಗರದ ಆರ್‌ಎಲ್‌ಎಸ್ ಮೈದಾನದಿಂದ ರಾಮಕೃಷ್ಣ ಮಿಷನ್ ಆಶ್ರಮದವರೆಗೆ ಬೃಹತ್ ಶೋಭಾಯಾತ್ರೆ ಸಂಚರಿಸಲಿದೆ. ಬೆಳಗ್ಗೆ 10.30ಕ್ಕೆ ನಂತರ ಆಶ್ರಮದಲ್ಲಿ ಸಭಾ ಕಾರ್ಯಕ್ರಮವಿದ್ದು, ಆಶ್ರಮದ ಕಾರ್ಯದರ್ಶಿ ಸ್ವಾಮಿ ಆತ್ಮಪ್ರಾಣಾನಂದಜೀ ಮಹಾರಾಜರು, ದಾವಣಗೆರೆ ರಾಮಕೃಷ್ಣ ಮಿಷನ್‌ನ ಸ್ವಾಮಿ ತ್ಯಾಗಿಶ್ವರಾನಂದಜೀ ಮಹಾರಾಜರು ಸಾನ್ನಿಧ್ಯ ವಹಿಸುವರು. ಮಹಾನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಅತಿಥಿಯಾಗಿ ಆಗಮಿಸುವರು. ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡುವರು. ಅಂತಾರಾಷ್ಟ್ರೀಯ ಅಥ್ಲೀಟ್ ಶೀತಲ್ ಕೊಲ್ಲಾಪುರೆ ಉಪಸ್ಥಿತರಿರುವರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...