More

    ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ; ಏ.1ರಿಂದ ಮಧ್ಯಂತರ ಆದೇಶ ಅನ್ವಯ

    ಬೆಂಗಳೂರು: 7 ನೇ ವೇತನ ಆಯೋಗದಿಂದ ಇನ್ನೂ ವರದಿ ಪಡೆಯದ ಸರ್ಕಾರ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೊಮ್ಮಾಯಿ‌ ಭರವಸೆ ನೀಡಿದ್ದಾರೆ.

    2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಏ.1 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿದೆ.

    ಇದನ್ನೂ ಓದಿ: Success Story | ನಾನು UPSC ಪರೀಕ್ಷೆ ಬರೆದಾಗ 9 ತಿಂಗಳ ಗರ್ಭಿಣಿ; ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದೆ!

    ಸಿಎಂ ಬೊಮ್ಮಾಯಿ ಆರ್ಥಿಕ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಪಡೆದು ಭರವಸೆ ನೀಡಿದ್ದು, 7ನೇ ವೇತನ ಆಯೋಗದ ವರದಿ ಬರುವವರೆಗೂ 17% ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದ್ದು, ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಸದ್ಯ ನೌಕರರು ಹೂಡಿದ ಮುಷ್ಕರ ಕೈಬಿಡುವ ವಿಶ್ವಾಸವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದ್ದಾರೆ.

    ಎನ್​ಪಿಎಸ್​ಗೆ ಸಮಿತಿ

    ಹೊಸ ಪಿಂಚಣಿ ರದ್ದು ಪರಿಶೀಲಿಸಿ ವರದಿ ಸಲ್ಲಿಸುವುದಕ್ಕಾಗಿ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಗೆ ನಿರ್ಧಾರ. ಬೇರೆ ರಾಜ್ಯಗಳಲ್ಲಿ ಯಾವ ಪರಿಸ್ಥಿತಿಯಿದೆ ಎಂದು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts