ಬಿಜೆಪಿಯಿಂದ ಎಲ್ಲೆಡೆ ಕೋಮು ಭಾವನೆ ಹೆಚ್ಚಳ

blank

ರಾಮದುರ್ಗ: ಸುಳ್ಳು ಹೇಳಿ ಕೋಮು ಭಾವನೆ ಕೆರಳಿಸುವ ಕೆಲಸ ಮಾಡುತ್ತಿರುವ ಬಿಜೆಪಿ ಮಾತನ್ನು ನಂಬಬೇಡಿ. ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಹೇಳಿದರು.

blank

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ನೇಕಾರರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದರು. ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಮಾತನಾಡಿ, ಮೋದಿ ಸರ್ಕಾರ ಜನರಿಗೆ ಮೇಲಿಂದ ಮೇಲೆ ಸಂಕಷ್ಟ ಕೊಡುತ್ತಲೇ ಇದೆ ಎಂದು ಆರೋಪಿಸಿದರು.

ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿ, ಇಂಡಿಯಾ ನೇತೃತ್ವದ ಮೈತ್ರಿ ಸರ್ಕಾರ ಬಂದರೆ ಮಹಿಳೆಯರಿಗೆ 1 ಲಕ್ಷ ರೂ. ನೀಡುವ ಗ್ಯಾರಂಟಿ ಭರವಸೆ ನೀಡಿದರು. ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಂಎಲ್‌ಸಿ ನಾಗರಾಜ ಯಾದವ, ಕೈಮಗ್ಗ ಅಭಿವದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಪುಸರಸಭೆ ಮಾಜಿ ಅಧ್ಯಕ್ಷೆ ಗಾಯತ್ರಿ ದೇವಾಂಗಮಠ ಮಾತನಾಡಿದರು.

ಕಾವೇರಿ ಹ್ಯಾಂಡ್‌ಲೂಮ ಅಧ್ಯಕ್ಷ ಬಿ.ಜಿ. ಗಣೇಶ, ದೇವರಾಜ ಅಭಿವದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ, ಪಾವರ್ ಲೂಮ್ ಅಭಿವದ್ಧಿ ನಿಗಮದ ಮಾಜಿ ಅಧ್ಯಕ್ಷ ಗೋ. ತಿಪ್ಪೇಶ, ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ದೇವಾನಂದ ಬಳ್ಳಾರಿ, ಕೆಪಿಸಿಸಿ ಉಪಾಧ್ಯಕ್ಷ ಆರ್.ಜೆ. ರಾಮದುರ್ಗ, ದೇವಾಂಗ ಹಾಗೂ ನೇಕಾರ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಅಶೋಕ ಸೂಳಿಭಾವಿ, ಮುಖಂಡ ಶಿವಾನಂದ ಬಳ್ಳಾರಿ ಇತರರಿದ್ದರು.

Share This Article
blank

ನಿಮ್ಮ ಬೆಳಿಗ್ಗೆಯನ್ನು ಹೀಗೆ ಆರಂಭಿಸಿ.. ಈ ಅಭ್ಯಾಸಗಳು ನಿಮ್ಮ ಜೀವನವನ್ನು ಬದಲಾಯಿಸುತ್ತವೆ..! healthy morning

healthy morning: ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಆಲೋಚನೆಗಳು ಮತ್ತು…

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

blank