More

    ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯಿಂದ ದೇವೇಗೌಡರ ಅಳಿಯ ಕಣಕ್ಕೆ: ಡಿಕೆ ಸುರೇಶ್​ಗೆ ​ಡಾಕ್ಟರ್​ ಮಂಜುನಾಥ್​ ಸೆಡ್ಡು!

    ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿರೀಕ್ಷೆಯಂತೆ ಡಾಕ್ಟರ್​ ಸಿ.ಎನ್​. ಮಂಜುನಾಥ್ ಅವರಿಗೆ ಬಿಜೆಪಿ ಪಕ್ಷ ಟಿಕೆಟ್​ ಘೋಷಿಸಿದೆ.

    ಇದನ್ನೂ ಓದಿ:  ಇನ್ನು ಪೇಟಿಎಂ ಫಾಸ್​ಟ್ಯಾಗ್ ಸ್ಥಗಿತ! ಮುಂದೆ ಏನು ಮಾಡಬೇಕು, ಇಲ್ಲಿದೆ ನೋಡಿ ಮಾಹಿತಿ ? 

    ಖ್ಯಾತ ಹೃದಯ ರೋಗ ತಜ್ಞ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ ಡಾ. ಸಿ ಎನ್ ಮಂಜುನಾಥ್ ಅವರಿಗೆ ಟಿಕೆಟ್​ ನೀಡಿದ್ದು ರಾಜಕೀಯ ಚಟುವಟಿಕೆ ಗರಿಗೆದರಿದೆ.

    ಡಾ. ಸಿಎನ್ ಮಂಜುನಾಥ್ ಅವರು ಗುರುವಾರ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿಎನ್ ಮಂಜುನಾಥ್ ಸ್ಪರ್ದೆ ಮಾಡಲಿದ್ದಾರೆ.

    ಕುಮಾರಸ್ವಾಮಿ ಒತ್ತಡವೇ ಮಂಜುನಾಥ್ ಸ್ಪರ್ಧೆಗೆ ಕಾರಣ: ಮಂಗಳಾವರ ರಾಮನಗರ ಮುಖಂಡರ ಸಭೆಯಲ್ಲಿ ಕುಮಾರಸ್ವಾಮಿ ಅವರು ಮಾತನಾಡಿ, ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳುತ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದರು.

    ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಜಡೆಎಸ್​ ಮತ್ತು ಬಿಜೆಪಿ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿದ್ದು, ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದ್ದರು.

    ಯಾರ್ಯಾರಿಗೆ ಟಿಕೆಟ್?

    • ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ
    • ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್
    • ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ
    • ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ
    • ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
    • ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ
    • ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ
    • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ
    • ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್
    • ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ
    • ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ
    • ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು
    • ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ
    • ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು
    • ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್
    • ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು
    • ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್
    • ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ
    • ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ
    • ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

    ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಫೈನಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts