More

    ಕೆಎಲ್‌ಇಯಿಂದ ಸ್ವಸ್ಥ ಸಮಾಜ ನಿರ್ಮಾಣ

    ಬೆಳಗಾವಿ: ಕರೊನಾ ವೈರಸ್ ಎದುರಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡುತ್ತ ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ಗಮಾನಾರ್ಹ ಕೊಡುಗೆ ನೀಡಿದೆ ಎಂದು
    ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಆರೋಗ್ಯದಲ್ಲಿ ಬೇರೆ ತೊಂದರೆ ಕಂಡುಬಂದರೆ ಸಮಗ್ರ ತಪಾಸಣೆ ಹಾಗೂ ಅಗತ್ಯ ಚಿಕಿತ್ಸೆ ನೀಡಲು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಪ್ರತ್ಯೇಕ ಆರೈಕೆ ಘಟಕ (ಪೋಸ್ಟ್ ಕೋವಿಡ್ ಕೇರ್ ಮತ್ತು ರಿಹೆಬಿಲೈಟೇಶನ್ ಸೆಂಟರ್) ಕಾರ್ಯಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಜಗತ್ತಿನಾದ್ಯಂತ ಜನರಲ್ಲಿ ತೀವ್ರ ಭಯ ಹುಟ್ಟಿಸಿ ಲಕ್ಷಾಂತರ ಜನರ ಸಾವಿಗೆ ಕರೊನಾ ವೈರಸ್ ಕಾರಣವಾಗುತ್ತಿದೆ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಉಲ್ಬಣಗೊಂಡಾಗ ಕೆಎಲ್‌ಇ ಆಸ್ಪತ್ರೆಯು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡು ನೂತನ ಕಟ್ಟಡವನ್ನು ಅದಕ್ಕಾಗಿಯೇ ಮೀಸಲಿಟ್ಟಿದೆ. ಕೋವಿಡ್-19 ರಹಿತ ಸಾಮಾನ್ಯ ರೋಗಿಗಳಿಗೆ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತ ಯಾವುದೇ ತೊಂದರೆ ಬಾರದಂತೆ ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಮಾತನಾಡಿ, ಕೋವಿಡ್-19 ಗಂಭೀರ ಪರಿಸ್ಥಿತಿಯಲ್ಲಿ ಯಾವುದೆ ರೀತಿಯ ಆರೋಗ್ಯ ತೊಂದರೆ ಉಂಟಾಗದಂತೆ ಪ್ರತ್ಯೇಕ ಘಟಕ ಸ್ಥಾಪಿಸಿ ಸುಮಾರು 1,300ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಅಲ್ಲದೆ, ಹೆರಿಗೆ, ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ಅನೇಕ ಶಸ್ತ್ರಚಿಕಿತ್ಸೆ ಹಾಗೂ ಇನ್ನಿತರ ಸಾಮಾನ್ಯ ಚಿಕಿತ್ಸೆಯನ್ನೂ ನೀಡಲಾಗಿದೆ. ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸಲು ಸಂಸ್ಥೆ ಕಾರ್ಯಪ್ರವೃತ್ತವಾಗಿದೆ ಎಂದರು. ‘ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆ್ಯಂಡ್ ರಿಸರ್ಚ್’ನ ಕುಲಪತಿ ಡಾ. ವಿವೇಕ ಸಾವೋಜಿ, ಜೆ.ಎನ್.ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎಸ್.ಮಹಾಂತಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ.ಜಾಲಿ, ಕುಲಸಚಿವ ಡಾ. ವಿ.ಎ. ಕೋಠಿವಾಲೆ, ಡಾ. ಎಚ್.ಬಿ. ರಾಜಶೇಖರ, ಡಾ. ವಿ.ಡಿ. ಪಾಟೀಲ, ಡಾ. ಆರ್.ಎಸ್. ಮುಧೋಳ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts