ಬೆಳಗಾವಿ: ಕೆಎಲ್‌ಇಯಿಂದ ವೌಲ್ಯಾಧಾರಿತ ಶಿಕ್ಷಣ

Latest News

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಬೆಳಗಾವಿ: ಪರಿಸರ ಸ್ನೇಹಿ ಹಾಗೂ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುವಂತಹ ಸಾಮಗ್ರಿಗಳು ಇಂದಿನ ಅವಶ್ಯಕತೆಯಾಗಿದೆ. ಅಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಅಂತಹ ಸಾಮಗ್ರಿಗಳನ್ನು ತಯಾರಿಸುವುದು ಮೆಕಾನಿಕಲ್ ಇಂಜಿನಿಯರ್‌ಗಳ ಜವಾಬ್ದಾರಿಯಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ ಹೇಳಿದರು.

ನಗರದ ಕೆಎಲ್‌ಇ ಡಾ. ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಮಗ್ರಿಗಳು ಹಾಗೂ ತಯಾರಿಕೆಯಲ್ಲಿ ಇತ್ತೀಚಿನ ಸುಧಾರಣೆಗಳು ಎಂಬ ವಿಷಯದ ಮೇಲೆ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗವು ಶುಕ್ರವಾರ ಆಯೋಜಿಸಿದ್ದ ಮೂರು ದಿನಗಳ ಅಂತಾರಾಷ್ಟ್ರೀಯ ತಾಂತ್ರಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲೇಷಿಯಾ ವಿಶ್ವವಿದ್ಯಾಲಯದ ಡಾ. ಹೆಂಡ್ರಿಕ್ ಸೈಮನ್ ಮಾತನಾಡಿ, ಕೆಎಲ್‌ಇ ಸಂಸ್ಥೆಯು ಎಲ್ಲ ರಂಗಗಳಲ್ಲಿ ವಿದ್ಯಾರ್ಥಿಗಳಿಗೆ ವೌಲ್ಯಾಧಾರಿತ ಶಿಕ್ಷಣ ನೀಡುತ್ತಿದೆ ಎಂದರು. ಮಲೇಷಿಯಾದಲ್ಲಿ ತಾಂತ್ರಿಕ ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಪೂರಕ ವಾತಾವರಣವಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಮುಂಬೈನ ಐಐಟಿಯ ಡಾ.ಪರಾಗ ಭಾರ್ಗವ ಮಾತನಾಡಿ, ಸಂಶೋಧನಾ ನಿರತರು ಕೇವಲ ಡಿಗ್ರಿಗಾಗಿ ಸಂಶೋಧನೆ ನಡೆಸದೇ ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಹ ಸಂಶೋಧನೆಯಲ್ಲಿ ನಿರತರಾಗಬೇಕು ಎಂದು ಹೇಳಿದರು.

ಎಸ್.ಸಿ.ಮೆಟಗುಡ್ಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ಸ್ವಾಗತಿಸಿ ಮಾತನಾಡಿ, ಈ ಅಂತಾರಾಷ್ಟ್ರೀಯ ಸಮ್ಮೇಳನದ ಉದ್ದೇಶ ಶೈಕ್ಷಣಿಕ ಹಾಗೂ ಉದ್ದಿಮೆ ರಂಗದ ವೃತ್ತಿಪರರನ್ನು ಒಂದುಗೂಡಿಸಿ ಸಾಮಗ್ರಿಗಳು ಹಾಗೂ ತಯಾರಿಕೆಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ತಿಳಿದುಕೊಳ್ಳುವುದಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಅರ್ಪಿತಾ ಹಾಗೂ ಸಂಗಡಿಗರು ಸ್ವಾಗತ ಗೀತೆ ಹಾಡಿದರು. ಪ್ರೊ. ಚಂದ್ರಶೇಖರ ಅಡಕೆ ಸಮ್ಮೇಳನದ ವಿವರ ನೀಡಿದರು. ಡಾ.ಸುಭಾಷ ಪಾಟೀಲ ವಂದಿಸಿದರು. ಪ್ರೊ. ಶ್ರೀದೇವಿ ಹಾಗೂ ಪ್ರೊ. ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಮೂರು ದಿನ ನಡೆಯುವ ಅಂತಾರಾಷ್ಟ್ರೀಯ ತಾಂತ್ರಿಕ ಸಮ್ಮೇಳನದಲ್ಲಿ ಜಗತ್ತಿನ ಎಂಟು ರಾಷ್ಟ್ರಗಳಿಂದ ಆಗಮಿಸಿದ ಸುಮಾರು 120 ಸಂಶೋಧನಾ  ವಿದ್ಯಾರ್ಥಿಗಳು ಹಾಗೂ ವೃತ್ತಿಪರರು ಪ್ರಬಂಧಗಳನ್ನು ಮಂಡಿಸಲಿದ್ದಾರೆ.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...