ಜ್ಞಾನದಿಂದ ವಿಜ್ಞಾನ ದೀವಿಗೆ ಅನಾವರಣ

vijnana
Published on

ಕೋಟ: ವಿಶ್ವ ವಿಜ್ಞಾನದ ತಳಹದಿ ಮೇಲೆ ನಿಂತು ಕಾರ್ಯನಿರ್ವಹಿಸುತ್ತಿದೆ, ವಿದ್ಯಾರ್ಥಿಗಳು ತಮ್ಮ ಜ್ಞಾನ ಹೊರಗೆಳೆದು ವಿಜ್ಞಾನ ಎಂಬ ದೀವಿಗೆ ಮೂಲಕ ವಿಶ್ವದ ಗಮನ ಸೆಳೆಯಬೇಕು ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಹೇಳಿದರು.

ಪಡುಕರೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಥಮಿಕ, ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರಯೋಗಗಳ ಪ್ರಾತ್ಯಕ್ಷಿಕೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಅಟಲ್ ಟಿಂಕರಿಂಗ್ ಲ್ಯಾಬ್ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಬಾಲ ಗಂಗಾಧರ ಶೆಟ್ಟಿ, ಸಂದೇಶ್ ಕೆ.ಎಲ್., ಡಯೇಟ್ ವಿಜ್ಞಾನ ವಿಭಾಗದ ಸುಬ್ರಹ್ಮಣ್ಯ ಭಟ್ ಇದ್ದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಪ್ರತಿಜ್ಞಾವಿಧಿ ಸಂಯುಕ್ತ ಪ್ರೌಢಶಾಲಾ ಶಿಕ್ಷಕಿ ಅನುಪಮಾ ಹಂದೆ ಬೋಧಿಸಿದರು. ಲಕ್ಷ್ಮೀ ಸೋಮಬಂಗೇರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ , ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನಿಸ್ ಬಾಂಝಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮಂಜುನಾಥ ಹೊಳ್ಳ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ವಿವೇಕಾನಂದ ವಿ.ಗಾಂವಕಾರ ಪ್ರಸ್ತಾವನೆ ಸಲ್ಲಿಸಿದರು. ಸಹ ಶಿಕ್ಷಕ ರಾಮದಾಸ್ ನಾಯಕ್ ಸ್ವಾಗತಿಸಿದರು. ಸಹಶಿಕ್ಷಕ ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. ಗೀತಾನಂದ ಫೌಂಡೇಶನ್ ರವಿಕಿರಣ್ ಕಾಂಚನ್ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net