More

    ಮೂಲಸೌಲಭ್ಯ ಕೊರತೆಯಿಂದ ಕಲಿಕೆಗೆ ಹಿನ್ನಡೆ: ಜಿಲ್ಲಾಧಿಕಾರಿಗೆ ಮನವಿ

    ರಾಯಚೂರು: ನಗರದಲ್ಲಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮೂಲಸೌಲಭ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.


    ಬಾಲಕಿಯರ ಮತ್ತು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಶೌಚಗೃಹ, ವಿದ್ಯುತ್ ಸರಬರಾಜು ಸೇರಿ ವಿವಿಧ ಸಮಸ್ಯೆಗಳಿರುವುದರಿಂದ ಕಲಿಕೆಗೆ ಹಿನ್ನಡೆಯಾಗಿದೆ. ಬಾಲಕರ ಪದವಿಪೂರ್ವ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದೆ ಎಂದು ದೂರಿದರು.

    ಇದನ್ನೂ ಓದಿ: ಮೂಲಸೌಲಭ್ಯಕ್ಕೆ ಒತ್ತು ನೀಡಲು ಕ್ರಮ


    ಸರ್ಕಾರಿ ಶಾಲೆ-ಕಾಲೇಜುಗಳಿಗೆ ಕುಡಿವ ನೀರು ಸೇರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಬೇಕು. ಶಿಥಿಲಗೊಂಡ ಕಾಲೇಜು ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ಕಟ್ಟಿಸಬೇಕು. ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಕಾರ್ಯದರ್ಶಿ ಪೀರ್‌ಸಾಬ್, ಹೇಮಂತ, ನಂದಗೋಪಾಲ್, ಬಸವರಾಜ, ವಿದ್ಯಾರ್ಥಿಗಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts