

'ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ತಮ್ಮಲ್ಲಿ ವನ್ಯಜೀವಿಯ ಯಾವುದೇ ಆಭರಣ ತಯಾರಿಸುವುದಿಲ್ಲ, ಮಾರಾಟ ಮಾಡುವುದಿಲ್ಲ. ಇದು ಶಿಕ್ಷಾರ್ಹ ಅಪರಾಧ' ಎಂಬ ಫಲಕ ಹಾಕುವಂತೆ ಸೂಚಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಹುಲಿ ಬೇಟೆಗಾರನ ಸೆರೆ
ಇತ್ತೀಚೆಗೆ ಬೆಳಗಾವಿ ವಿಭಾಗದಲ್ಲಿ ಖಾನಾಪುರ ಬಳಿಯ ಜಳಗಾ ಅರಣ್ಯದ ವ್ಯಾಪ್ತಿಯಲ್ಲಿ ಮಧ್ಯಪ್ರದೇಶದ ಚಿಕ್ಕಾಅಲಿಯಾಸ್ ಕೃಷ್ಣಾ ಪಾಟ್ಲೆ ಪವಾರ್ ಎಂಬುವನನ್ನು ಬಂಧಿಸಲಾಗಿದ್ದು, ಆತ ಹುಲಿ ಕಳ್ಳಬೇಟೆಗಾರನಾಗಿದ್ದು, ಆತನ ವಿರುದ್ಧ ಹಲವು ರಾಜ್ಯಗಳಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆ ಕಳ್ಳಬೇಟೆ ನಿಗ್ರಹಕ್ಕೂ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
4000 ಹುದ್ದೆ ಖಾಲಿ ಅರಣ್ಯ ಇಲಾಖೆಯಲ್ಲಿ ಸುಮಾರು 4 ಸಾವಿರ ಹುದ್ದೆ ಖಾಲಿ ಇದ್ದು, ಈಗಾಗಲೇ ಹಣಕಾಸು ಇಲಾಖೆ 800 ಹುದ್ದೆ ಭರ್ತಿಗೆ ಅನುಮತಿ ನೀಡಿದೆ. ಶೀಘ್ರವೇ ಇದರ ಭರ್ತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೆಶ್ ಕುಮಾರ್ ದೀಕ್ಷಿತ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸುಭಾಶ್ ಮಾಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.