More

    ಕ್ರೀಡೆಯಿಂದ ಮಾನಸಿಕ ಸ್ಥೈರ್ಯ ಹೆಚ್ಚಳ

    ಮೂಡಲಗಿ: ಶಾಲಾ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ಎಂಇಎಸ್ ಪದವಿ ಕಾಲೇಜು ಪ್ರಾಧ್ಯಾಪಕ ಲಕ್ಕಣ್ಣ ಮನ್ನಾಪುರೆ ಹೇಳಿದರು.
    ಪಟ್ಟಣದ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯ ಶ್ರೀ ವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ವೈಯಕ್ತಿಕ ಮತ್ತು ಗುಂಪು ಆಟಗಳನ್ನು ಆಡುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದಢರಾಗುತ್ತಾರೆ. ಪಠ್ಯ ವಿಷಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದು ಅವಶ್ಯಕ. ಇದರಿಂದ ಅವರು ಸಾಧಕರಾಗಿ ಹೊರಹೊಮ್ಮುತ್ತಾರೆ ಎಂದರು.

    ಕಾಲೇಜು ಪ್ರಾಂಶುಪಾಲ ಚಿದಾನಂದ ಶೆಟ್ಟರ ಮಾತನಾಡಿ, ಮೊಬೈಲ್ ಮೋಹದಿಂದ ಕ್ರೀಡೆಯಲ್ಲಿ ಭಾಗವಹಿಸಲು ಹಾಗೂ ಓದಿನಲ್ಲಿ ಮಕ್ಕಳಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಪಾಲಕರು ಮಕ್ಕಳ ಓದಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಗಮನ ಹರಿಸಬೇಕು ಎಂದರು. ಶಿಕ್ಷಕ ಶಿವಗೌಡ ಪಾಟೀಲ ಮಾತನಾಡಿದರು.

    ಸಂಸ್ಥೆ ಅಧ್ಯಕ್ಷ ಸಂತೋಷ ಪಾರ್ಶಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಆಟಗಳ ಮಹತ್ವ ತಿಳಿದುಕೊಳ್ಳಬೇಕು. ರಾಷ್ಟ್ರೀಯ ಆಟಗಾರರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲ ಜೋಸೆಫ್ ಬೈಲಾ, ಸಂಯೋಜಕ ಉಮೇಶ ಪುಟ್ಟಿ, ಮುಖ್ಯೋಪಾಧ್ಯಾಯ ಕಾಮಣ್ಣ ಕಾಳೆ, ಸಹಶಿಕ್ಷಕಿ ವಂದನಾ ನಿಡಗುಂದಿ, ಶಿಕ್ಷಕಿಯರಾದ ಬೋರವ್ವ ಕಬ್ಬೂರ, ಐಶ್ವರ್ಯ ಹೆಳವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts