More

    ಕಾಂಗ್ರೆಸ್‌ನಿಂದ ದೀನ-ದಲಿತರ ಅಭಿವೃದ್ಧಿ ಸಾಧ್ಯ: ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿಕೆ

    ಮಸ್ಕಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು ಆಗಿದ್ದಾರೆ. ಜನ ಸೇವೆ ಮಾಡುವುದೇ ಜನಾರ್ದನ ಸೇವೆ ಆಗಿದ್ದು, ಸೇವೆ ಮಾಡುವ ಅವಕಾಶ ಕೊಡಿ. ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಮೂಲಕ ನಿಮ್ಮ ಋಣ ತೀರಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

    ನನಗೆ ಆಶೀರ್ವಾದ ಮಾಡಿ

    ಮ್ಯಾದರಾಳ ತಾಂಡದಲ್ಲಿ ಶನಿವಾರ ಮತಯಾಚನೆ ಮಾಡಿ ಮಾತನಾಡಿದರು. ಬಡವರ, ದೀನರ, ದಲಿತರ ಅಭಿವೃದ್ಧಿ ಕಾಂಗ್ರೆಸ್‌ನಿಂದ ಸಾಧ್ಯ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ನನಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ ಎಂದು ಕೋರಿದರು.


    ಇದನ್ನೂ ಓದಿ: ಖರ್ಗೆ ಕುಟುಂಬಕ್ಕೆ ಬೆದರಿಕೆ ಆರೋಪ; ಬಿಜೆಪಿ ವಿರುದ್ಧ ಕಾಂಗ್ರೆಸ್​ ಟ್ವೀಟಾಸ್ತ್ರ

    ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

    ಕಳೆದ ಉಪ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುವ ಅವಕಾಶ ನೀಡಿದ್ದೀರಿ. ನನಗೆ ಸಿಕ್ಕ ಕಡಿಮೆ ಅವಧಿಯಲ್ಲಿ ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಭಾರಿ ಮತ್ತೊಮ್ಮೆ ನನ್ನನ್ನು ಗೆಲ್ಲಿಸಿರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನೇಕ ಜನಪರವಾದ ಯೋಜನೆಗಳನ್ನು ಜಾರಿಗೆ ತರುತ್ತದೆ.

    ಬಡ ಜನತೆಯ ಕಷ್ಟ-ಸುಖ ಕಾಂಗ್ರೆಸ್ ಅರಿತಿದೆ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿ ಯುವಕರಿಗೆ, ಮಹಿಳೆಯರಿಗೆ, ರೈತರಿಗೆ ಅನೇಕ ರೀತಿಯಲ್ಲಿ ಸಹಾಯ ಮಾಡುವ ಮೂಲಕ ರಾಜ್ಯದಲ್ಲಿ ಸ್ಥಿರವಾದ ಆಡಳಿತ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದರು.

    ಎತ್ತಿನ ಬಂಡಿಯಲ್ಲಿ ಮೆರವಣಿಗೆ

    ಮೆದರಾಳ, ಗೊಲ್ಲರಹಟ್ಟಿ, ನಾಗರಬೆಂಚಿ, ಅಂತರಗಂಗೆ ತಾಂಡ, ಮ್ಯಾದರರಾಳ ತಾಂಡಗಳಲ್ಲಿ ಆರ್.ಬಸನಗೌಡ ತುರ್ವಿಹಾಳ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಮ್ಯಾದರಾಳ ತಾಂಡದಲ್ಲಿ ಬಸನಗೌಡ ತುರ್ವಿಹಾಳ ಅವರನ್ನು ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮಾಡಲಾಯಿತು.

    ತುರ್ವಿಹಾಳ ತಲೆಗೆ ಹಸಿರು ಶಾಲು ಸುತ್ತಿಕೊಂಡು ಬಂಡಿ ಹೊಡೆಯುತ್ತಾ ತಾಂಡ ಪ್ರವೇಶ ಮಾಡಿದರು. ಲಂಬಾಣಿ ಸಮುದಾಯದ ಮಹಿಳೆಯರು ನೃತ್ಯ ಮಾಡುವ ಮೂಲಕ ಸ್ವಾಗತಿಸಿದರು. ಮಸ್ಕಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಸಿದ್ದನಗೌಡ ಮಾಟೂರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts