More

    ಇಂದಿನಿಂದ ವಿವಿ ವಿದ್ಯಾರ್ಥಿಗಳಿಗೆ ಬಿಸಿಯೂಟ; ಅನ್ನಪೂರ್ಣೇಶ್ವರಿ ಆಹಾರ ವಿತರಣಾ ಸಮಿತಿ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಾಹಿತಿ

    ತುಮಕೂರು: ವಿವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಗೆ ಮಾ.6ರಂದು ಚಾಲನೆ ಸಿಗಲಿದ್ದು, ಅಗತ್ಯ ಸೌಲಭ್ಯಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶ್ರೀ ಅನ್ನಪೂರ್ಣೇಶ್ವರಿ ಆಹಾರ ವಿತರಣಾ ಸಮಿತಿ ಅಧ್ಯಕ್ಷ ಸ್ವಾಮಿ ಜಪಾನಂದಜೀ ತಿಳಿಸಿದರು.
    ತುಮಕೂರು ವಿವಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
    ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ದೊಡ್ಡ ನೆರವು
    ಸಿಕ್ಕಂತಾಗುತ್ತದೆ. ನಗರದ ಶಿರಡಿ ಮಂದಿರದಲ್ಲಿ ಅಡುಗೆ ತಯಾರಿಸಲಾಗುತ್ತದೆ. ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಅದಮ್ಯ ಚೇತನ ಸಂಸ್ಥೆಯ ತೇಜಸ್ವಿನಿ ಅನಂತಕುಮಾರ್ ಸೇರಿ ಸ್ಥಳೀಯರು ನೆರವು ನೀಡುತ್ತಿದ್ದಾರೆ ಎಂದರು.

    ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್ ನೀಡಲಿದ್ದು, ಯೋಜನೆಗೆ ವಿವಿ ಹಾಗೂ ಕಲಾ ಕಾಲೇಜಿನ ಸಿಬ್ಬಂದಿ, ಮಕ್ಕಳು ಸಹಕಾರ ನೀಡುತ್ತಿದ್ದಾರೆ ಎಂದರು.
    ವಿವಿ ಆವರಣದಲ್ಲಿ ದೇಶಕ್ಕೆ ಮೊದಲ ಹಾಗೂ ಮಾದರಿಯಾದ ಕೆಲಸ ನಡೆಯಲಿದೆ, ಛತ್ತಿಸ್‌ಘಡದಲ್ಲಿ ಈ ಪ್ರಯತ್ನ ನಡೆಯುತ್ತಿದೆ. ಆದರೆ, ನಾವು ಮಾಡಿ ತೋರಿಸುತ್ತಿದ್ದೇವೆ. ಮಕ್ಕಳೆಲ್ಲಾ ಪ್ರಸಾದದ ರೂಪದಲ್ಲಿ ಸ್ವೀಕರಿಸುವ ಸಂಕಲ್ಪ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

    ಆರ್ಥಿಕವಾಗಿ ಸಬಲರಾಗಿರದ ದೇಶದ ಮಕ್ಕಳಿಗೆ ಅನ್ನ ನೀಡುವುದು ಶ್ರೇಷ್ಠ ಕಾರ್ಯವಾಗಿದ್ದು, ದಾನಿಗಳು ಮುಂದೆ ಬಂದಿದ್ದಾರೆ. ಮಾ.6ರಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್, ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ಹೆಗ್ಡೆ, ನಿವೃತ್ತ ನ್ಯಾಯಾಧೀಶರಾದ ರತ್ನಕಲಾ, ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ, ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದರು.

    ವಿವಿಯಲ್ಲಿ ವಿಶಿಷ್ಟ ಕಾರ್ಯ ಆರಂಭಿಸಲಾಗುತ್ತಿದೆ. 6,500 ವಿದ್ಯಾರ್ಥಿಗಳಿದ್ದು, 2 ಸಾವಿರಕ್ಕೂ ಹೆಚ್ಚು ಮಕ್ಕಳು ಗ್ರಾಮೀಣ ಭಾಗದವರಾಗಿದ್ದು ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.
    | ಪ್ರೊ.ಎಂ.ವೆಂಕಟೇಶ್ವರಲು,
    ವಿವಿ ಕುಲಪತಿ

    ಊಟ, ಶಿಸ್ತು ಹಾಗೂ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.
    |ನಹಿದಾ ಜಮ್‌ಜಮ್,
    ಕುಲಸಚಿವೆ

    From today, the university will open; Annapurneshwari Food Distribution Committee President Swami Japanandji information

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts