More

  ನಾಳೆಯಿಂದ ರಾಜ್ಯದಲ್ಲಿ ಮಳೆ ತುಸು ಇಳಿಮುಖ

  ಬೆಂಗಳೂರು: ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ಮಳೆ ಜೂ 16ರಿಂದ ಕ್ಷೀಣವಾಗಲಿದೆ.ಕಲಬುರಗಿ, ಕೊಪ್ಪಳ, ರಾಮನಗರ, ಶಿವಮೊಗ್ಗ, ಯಾದಗಿರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಶನಿವಾರ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.

  ಮುಂಗಾರು ಪ್ರವೇಶಿಸಿದ ದಿನದಿಂದಲೂ ರಾಜ್ಯದಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಐದು ವರ್ಷ ಬಳಿಕ 2024ರ ಜೂ 1ರಿಂದ ಜೂ 10ರವರೆಗೆ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಸುರಿದಿದೆ. ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಸುರಿದಿತ್ತು. ಇದೀಗ ಮೂರು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೀದರ್​, ಕಲಬುರಗಿ, ವಿಜಯಪುರದಲ್ಲಿ ಜೂ 16ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅರ್ಲಟ್​ ನೀಡಲಾಗಿದೆ.

  ಮುಂಗಾರು ಮಳೆಯೊಂದಿಗೆ ರಾಜ್ಯದಲ್ಲಿ ಹೆಚ್ಚಿದ ಡೆಂಘೆ- ಚಿಕೂನ್‌ಗುನ್ಯಾ
  ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ ಎರಡು ಸಾಧಾರಣ ಮಳೆ ಸುರಿಯಲಿದೆ.

  See also  ನರಗುಂದ ತಾಲೂಕಲ್ಲಿ ನೆರೆ ಭೀತಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts