More

    ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನಾ ಮೆರವಣಿಗೆ

    ಹಾವೇರಿ: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ವ್ಯವಸಾಯ ಕಾರ್ಮಿಕರ ವೃತ್ತಿಪರ ಯೂನಿಯನ್ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಸ್ಥಳೀಯ ಮುರುಘಾ ಮಠದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಹೊಸಮನಿ ಸಿದ್ದಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು. ನಂತರ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

    ಸಂಘಟನೆಯ ಜಿಲ್ಲಾಧ್ಯಕ್ಷೆ ಕಾಮಾಕ್ಷಿ ರೇವಣಕರ ಮಾತನಾಡಿ, ಕೃಷಿ ಹಾಗೂ ಸಂಬಂಧಿತ ವಲಯಗಳಲ್ಲಿ ದುಡಿಯುತ್ತಿರುವ ಕೂಲಿಕಾಮಿರ್ಕರ ಬದುಕು ದುಸ್ಥಿತಿಯಲ್ಲಿದ್ದು, ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೀಡುತ್ತಿರುವ 309 ರೂ. ಕುಟುಂಬ ನಿರ್ವಹಣೆಗೆ ಸಾಲುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಕೆಲಸ ಕೇಳಿದಾಗ ಕೊಡುವುದಿಲ್ಲ, ಅದು 4-5ವಾರಗಳ ನಂತರ ಕೆಲಸ ನೀಡಲಾಗುತ್ತಿದೆ. ಆದ್ದರಿಂದ ಕನಿಷ್ಠ ಕೂಲಿ 800 ರೂ. ನೀಡಬೇಕು. ಉದ್ಯೋಗದಲ್ಲಿರುವ ಪ್ರತಿಯೊಬ್ಬ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ನೀಡಿ, ವರ್ಷಕ್ಕೆ 200 ದಿನ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts