ಗಡಿಭಾಗದ ಕನ್ನಡ ಶಾಲೆಗಳನ್ನು ಉಳಿಸಿ

ಬೆಳಗಾವಿ: ಗಡಿಭಾಗದ ಪ್ರದೇಶಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ನಿಪ್ಪಾಣಿ ಗಡಿಭಾಗದ ಪ್ರದೇಶವಾಗಿದ್ದು, ಇಲ್ಲಿನ ಸರ್ಕಾರಿ ಕನ್ನಡ ಶಾಲೆಗಳು ಶಿಕ್ಷಕರ ಕೊರತೆ ಹಾಗೂ ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಆದ್ದರಿಂದ ಗಡಿಭಾಗದ ಸರ್ಕಾರಿ ಶಾಲೆಗಳನ್ನು ಸರ್ವಾಂಗೀಣವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕನ್ನಡ ಶಾಲೆಗಳಿಗೆ ಮಂಜೂರಾದ 372 ಶಿಕ್ಷಕರ ಪೈಕಿ 79 ಹಾಗೂ ಭಾಷಾ ಅಲ್ಪ ಸಂಖ್ಯಾತ ಶಾಲೆಗಳಲ್ಲಿ ಕನ್ನಡ ವಿಷಯದ 86 ಶಿಕ್ಷಕರ ಪೈಕಿ 19 ಶಿಕ್ಷಕರ ಹುದ್ದೆ ಖಾಲಿ ಇವೆ. ಆದ್ದರಿಂದ ಶಿಕ್ಷಕರ ಕೊರತೆ ನೀಗಿಸಲು ತ್ವರಿತ ಕ್ರಮಕೈಗೊಳ್ಳಬೇಕು.

ಕೋರಿಕೆ ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕರ ಸಂಖ್ಯೆಯನ್ನು ಗಮನಿಸಿದಲ್ಲಿ ಪ್ರತಿವರ್ಷ ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕರ ಸಂಖ್ಯೆ 30. ಆದರೆ ವರ್ಗಾವ ೆಹೊಂದಿ ನಿಪ್ಪಾಣಿ ವಲಯಕ್ಕೆ ಹಾಜರಾಗುವ ಶಿಕ್ಷಕರು ಸಂಖ್ಯೆ ಕೇವಲ 6 ಮಾತ್ರ. ಪ್ರಸ್ತುತ ಕಡ್ಡಾಯ ವರ್ಗಾವಣೆ ಹೊಂದಿ 20 ಕನ್ನಡ ಶಿಕ್ಷಕರು ಬೇರೆ ವಲಯಕ್ಕೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಶಿಕ್ಷಕರ ವರ್ಗಾವಣೆಯಾದಲ್ಲಿ ಗಡಿಭಾಗದ ಕನ್ನಡ ಶಾಲೆಗಳಲ್ಲಿ ಹಾಗೂ ಕನ್ನಡ ಭಾಷೆಗೆ ಕುತ್ತು ಬರುವುದನ್ನು ಕಡೆಗಣಿಸುವಂತಿಲ್ಲ ಎಂದರು.

ನಿಪ್ಪಾಣಿ ಸೇರಿ ಗಡಿಭಾಗದ ವಲಯಗಳಲ್ಲಿ ಶಿಕ್ಷಕರ ಕಡ್ಡಾಯ ವರ್ಗಾವಣೆಯಲ್ಲಿ ಖಾಲಿ ಇರುವ ಸಿ ವಲಯದ ಹುದ್ದೆಗಳಿಗೆ ವರ್ಗ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *