More

    ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ

    ವಿಜಯಪುರ: ರಾಜ್ಯ ಸರ್ಕಾರಿ ನೌಕರರಿಗೆ ಶೇ.40 ರಷ್ಟು ವೇತನ ಹೆಚ್ಚಿಸಿ 7ನೇ ವೇತನ ಆಯೋಗವನ್ನು ಜಾರಿ ಮಾಡುವುದು, ಖಾಲಿ ಇರುವ 2.60 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೊರಗುತ್ತಿಗೆ ಹಾಗೂ ಅತಿಥಿ ನೌಕರರನ್ನು ಖಾಯಂ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀಕುಮಾರ ಒತ್ತಾಯಿಸಿದರು.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಹಾಕೂಟೇಶ್ವರ ದೇವಾಲಯದ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಉತ್ತರ ಕರ್ನಾಟದ ಪದಾಧಿಕಾರಿಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ನ.3 ರಿಂದ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ದೆಹಲಿ ಚಲೋ ಕಾರ್ಯಕ್ರಮ ಆಯೋಜಿಸಲಾಗಿದೆ. ಪೂರ್ವಭಾವಿಯಾಗಿ ಜಿಲ್ಲಾಮಟ್ಟದ ಬೃಹತ್ ಸಮಾವೇಶವನ್ನು ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಹೋರಾಟ ನಡೆಸಲು ಕಾರ್ಯಾಗಾರದಲ್ಲಿ ತೀರ್ಮಾನಿಸಲಾಗಿದೆ ಎಂದರು.

    ಕೆಲವು ರಾಜ್ಯಗಳಲ್ಲಿ ಹಳೇ ಪಿಂಚಣಿ ರದ್ದು ಮಾಡಿದ್ದಾರೆ. ಹೊಸ ಪಿಂಚಣಿಯಿಂದ ನೌಕರರು ಬೀದಿಗೆ ಬರುವಂತಾಗಿದೆ. ರಾಜ್ಯದಲ್ಲಿಯೂ ಹಳೇ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಒತ್ತಾಯಿಸಿದರು.

    ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎಚ್.ಎಚ್.ಜೈಕುಮಾರ ಮಾತನಾಡಿ, 7ನೇ ವೇತನ ಆಯೋಗ ಜುಲೈನಿಂದ ಜಾರಿಯಾಗಬಹುದು ಎಂಬ ನಿರೀಕ್ಷೆಯಲ್ಲಿ ನೌಕರರಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಮತ್ತೆ ಮುಂದೆ ಹಾಕಿದ್ದು, ನೌಕರರಿಗೆ ನಿರಾಸೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಅಖಿಲ ಭಾರತ ನೌಕರರ ಸಂಘದ ಉಪಾಧ್ಯಕ್ಷ ಮಹಾದೇವಯ್ಯ ಮಠಪತಿ ಮಾತನಾಡಿ, ಕರೊನಾ ವೇಳೆ ರಾಜ್ಯ ಸರ್ಕಾರಿ ಹಾಗೂ ಅರೇ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ 4,500 ಕೋಟಿ ರೂ.ವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ಇದುವರೆಗೂ ಅದನ್ನು ಬಿಡುಗಡೆ ಮಾಡಿಲ್ಲ. ಆ ಹಣವನ್ನು ಸರ್ಕಾರ ನೌಕರರಿಗೆ ಮರಳಿ ನೀಡಬೇಕು ಎಂದು ಆಗ್ರಹಿಸಿದರು.

    ಒಕ್ಕೂಟದ ಉಪಾಧ್ಯಕ್ಷ ಸುರೇಶ ಜೀಬಿ, ಅಶೋಕ ಇಳಕಲ್ಲ, ಚಂದ್ರಶೇಖರ ಲಿಂಡಿ, ರುದ್ರಪ್ಪ ಮೆಣಸಗಿ, ಶೋಭಾ ಲೋಕನಾಗಣ್ಣ, ಟಿ.ಆರ್.ವೇದವತಿ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts