
ವಿಜಯಪುರ: ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಅನುದಾನ ಬಿಡುಗಡೆಗೆ ವಿನಂತಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಸರ್ಕಾರ ಕಾರ್ಯದರ್ಶಿ ಡಿ. ರಂದೀಪ ಅವರಿಗೆ ದೂರವಾಣಿಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಜಿಲ್ಲಾಧಿಕಾರಿ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹಣ ಬಿಡುಗಡೆಗೊಳಿಸುವ ಭರವಸೆ ನೀಡಿದರು.
ಸಂದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮತ್ತಿತರರಿದ್ದರು.