More

    ಫರ್ನಿಚರ್ ಕ್ಲಸ್ಟರ್‌ಗೆ ಜಾಗ ಗುರುತಿಸಿ, ಕೈಗಾರಿಕೆ ಅಭಿವೃದ್ಧಿ ಸಭೆಯಲ್ಲಿ ಜಗದೀಶ್ ಶೆಟ್ಟರ್ ಸೂಚನೆ

    ಉಡುಪಿ: ಜಿಲ್ಲೆಯಲ್ಲಿ ಮರದ ಸಾಮಗ್ರಿಗಳನ್ನು ತಯಾರಿಸುವ ‘ಫರ್ನಿಚರ್ ಕ್ಲಸ್ಟರ್’ ಆರಂಭಿಸಲು ಸೂಕ್ತ ಜಾಗ ಗುರುತಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

    ಶುಕ್ರವಾರ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಕೈಗಾರಿಕಾಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಬಂದರು ಇರುವುದರಿಂದ ವಿದೇಶಗಳಿಂದ ಗುಣಮಟ್ಟದ ಮರಗಳನ್ನು ಆಮದು ಮಾಡಿ, ಪೀಠೋಪಕರಣ ತಯಾರಿಸಿ ರಫ್ತು ಮಾಡಲು ಅವಕಾಶಗಳಿವೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶ ದೊರಯಲಿದೆ. ಇದಕ್ಕಾಗಿ ಅಗತ್ಯ ಪ್ರಮಾಣದ ಭೂಮಿ ಗುರುತಿಸುವಂತೆ ಸಚಿವರು ತಿಳಿಸಿದರು.

    ಜಿಲ್ಲೆಯ ನಂದಿಕೂರು ಸೇರಿದಂತೆ ವಿವಿಧ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆ ಆರಂಭಿಸಲು ಕೈಗಾರಿಕೆಗಳು ಪಡೆದಿರುವ ಭೂಮಿ ಸಂಪೂರ್ಣ ಬಳಕೆಯಾಗದಿರುವ ಬಗ್ಗೆ ಬೆಂಗಳೂರಿನಿಂದ ತಜ್ಞರ ತಂಡದಿಂದ ಪರಿಶೀಲಿಸಿ, ವರದಿ ಪಡೆಯಲಾಗುವುದು. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡುವಂತೆ ಹಾಗೂ ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಂತೆ ಕೈಗಾರಿಕೋದ್ಯಮಿಗಳಿಗೆ ಸೂಚಿಸಿದರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಾಸಕ ಕೆ.ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಕೆಐಎಡಿಬಿ ಸಿಇಒ ಶಿವಶಂಕರ್ ಉಪಸ್ಥಿತರಿದ್ದರು.

    ರೆಡ್ಡಿ ಬಂಧನ ಆಗಿರಲಿಲ್ಲವೇ?
    ವಿನಯ ಕುಲಕರ್ಣಿ ಬಂಧನ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಪಕ್ಷದ ಮುಖಂಡನ ರಕ್ಷಣೆಗಾಗಿ ಹೇಳಿಕೆ ನೀಡುತ್ತಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಯುಪಿಎ ಸರ್ಕಾರ ಇದ್ದಾಗ ಜಗನ್ಮೋಹನ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಅವರನ್ನು ಜೈಲಿಗೆ ಕಳುಹಿಸಿದ್ದರು. ಆಗ ಬಿಜೆಪಿ ರಾಜಕೀಯ ಪ್ರೇರಿತ ಎಂಬ ಆರೋಪ ಮಾಡಿರಲಿಲ್ಲ. ಸಿಬಿಐ ಸ್ವತಂತ್ರ ಸಂಸ್ಥೆಯಾಗಿ ತನಿಖೆ ಮಾಡಲಿ. ತಪ್ಪಿಲ್ಲದ ಮೇಲೆ ಭಯವೇಕೆ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ರಾಜಕಾರಣಕ್ಕೆ ಬಂದಾಗ ಇದ್ದ ಆಸ್ತಿ ಮತ್ತು ಈಗಿರುವ ಆಸ್ತಿ ಬಗ್ಗೆ ಸಿಬಿಐ ವಿವರ ಕೇಳುತ್ತಿದೆ. ಸರಿಯಾದ ಮಾರ್ಗದಲ್ಲಿ ಆಸ್ತಿ ಗಳಿಸಿದ್ದರೆ ಭಯ ಯಾಕೆ ಎಂದವರು ಪ್ರಶ್ನಿಸಿದರು.

    ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ವಿವಿಧ ಕ್ಲಸ್ಟರ್‌ಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ. ಕೊಪ್ಪಳದಲ್ಲಿ ಆಟಿಕೆ ತಯಾರಿ ಕ್ಲಸ್ಟರ್ ಮತ್ತು ಯಾದಗಿರಿ, ರಾಯಚೂರಿನಲ್ಲಿ ಫಾರ್ಮಾ ಕ್ಲಸ್ಟರ್ ಆರಂಭಕ್ಕೆ ಯೋಜನೆ ರೂಪಿಸಲಾಗಿದೆ. ಕ್ಲಸ್ಟರ್ ಆರಂಭಕ್ಕೆ ಸರ್ಕಾರದಿಂದ ಎಲ್ಲ ರೀತಿಯ ಅಗತ್ಯ ನೆರವು ನೀಡಲಾಗುವುದು.
    – ಜಗದೀಶ್ ಶೆಟ್ಟರ್, ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts