ಮತ್ತಷ್ಟು ಅನ್​ಲಾಕ್​: ಪೂಜಾ ಚಟುವಟಿಕೆಗಳಿಗೆ ಅನುಮತಿ; ಮನೋರಂಜನಾ ಉದ್ಯಾನಗಳಿಗೆ ಅವಕಾಶ

temples
Published on

ಬೆಂಗಳೂರು : ಕರೊನಾ ಮತ್ತಷ್ಟು ಇಳಿಮುಖವಾಗುತ್ತಿರುವ ಕಾರಣ, ರಾಜ್ಯದಲ್ಲಿ ಹೆಚ್ಚುವರಿ ಚಟುವಟಿಕೆಗಳಿಗೆ ಅನುಮತಿ ನೀಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಮತ್ತು ಇತರ ಕೆಲವು ವಿನಾಯಿತಿಗಳನ್ನು ಸರ್ಕಾರ ಪ್ರಕಟಿಸಿದೆ.

ಪೂಜಾ ಸ್ಥಳಗಳು (ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳು) ತೆರೆಯಲು ಅನುಮತಿ ನೀಡಲಾಗಿದೆ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಭಾನುವಾರದಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್ಒಪಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಷರತ್ತು ವಿಧಿಸಲಾಗಿದೆ. ಆದಾಗ್ಯೂ, ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು, ಸಭೆಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಸಂಬಂಧವಾಗಿ ಮತ್ತೊಂದು ಸುತ್ತೋಲೆ ಪ್ರಕಟಿಸಿರುವ ಸರ್ಕಾರ, ಮನೋರಂಜನಾ ಉದ್ಯಾನವನಗಳು ಮತ್ತು ಅಂತಹುದೇ ಸ್ಥಳಗಳನ್ನು ತೆರೆಯಲೂ ಸಹ ಅನುಮತಿ ನೀಡಿದೆ. ಆದರೆ, ಜಲ ಕ್ರೀಡೆ ಅಥವಾ ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net