ತರೀಕೆರೆ: ಮಕ್ಕಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಭವಿಷ್ಯ ಉಜ್ವಲವಾಗಲಿದೆ ಎಂದು ತಾಪಂ ನಿವೃತ್ತ ಇಒ ಕೆ.ಸಿ.ಶಿವಮೂರ್ತಿ ಹೇಳಿದರು.
ಅಜ್ಜಂಪುರ ತಾಲೂಕು ಚಿಕ್ಕಾನವಂಗಲ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ.ರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ, ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದರು.
ಸಿಆರ್‌ಪಿ ಭಾಗ್ಯಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಿದ್ದು, ಇಂದಿನ ಮಕ್ಕಳು ಅವರ ಹಾದಿಯಲ್ಲಿ ಸಾಗಬೇಕು ಎಂದು ಹೇಳಿದರು. 7ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಗ್ರಾಪಂ ಸದಸ್ಯರಾದ ಮಲ್ಲಿಕಾರ್ಜುನ, ಪುಷ್ಪ್ಪಾ, ಸಿ.ಇ.ಯೋಗೀಶ್, ಟಿ.ಶಿವಮೂರ್ತಿ, ಬಸವಯ್ಯ, ಸಿ.ಟಿ.ಮಹೇಶ್, ವಿರೂಪಾಕ್ಷಪ್ಪ, ರುದ್ರೇಶ್ ಇತರರಿದ್ದರು.