23.2 C
Bangalore
Saturday, December 14, 2019

ಉಡುಪಿ ಡಿಸಿ ಅಧಿಕಾರ ಸ್ವೀಕಾರ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ಮಂಗಳವಾರ, ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದೆ. ಅದೀಗ ಸಕಾರಗೊಂಡಿದೆ. ಡಿಸಿಯಾಗಿ ಮೊದಲು ಉಡುಪಿಯಂಥ ಮುಂದುವರಿದ ಜಿಲ್ಲೆಗಳಲ್ಲಿ ಕೆಲಸ ಮಾಡುವುದು, ಮುಂದಿನ ಹಂತದಲ್ಲಿ ಬೇರೆ ಜಿಲ್ಲೆಗಳಲ್ಲಿಯೂ ಮಾದರಿಯಾಗಿ ಕೆಲಸ ಮಾಡಲು ಸಹಕಾರಿ. ಹಾಗಾಗಿ ನನ್ನ ಆಯ್ಕೆ ಉಡುಪಿ ಆಗಿತ್ತು. ಜಿಲ್ಲೆಯಲ್ಲಿ 2006ರಲ್ಲಿ ಪ್ರೊಬೆಷನರಿ ಸೇವೆ ಸಲ್ಲಿಸಿದ್ದು, ಕಂದಾಯ ಸಂಬಂಧಿತ ವಿಚಾರಗಳ ಬಗ್ಗೆ ತಿಳುವಳಿಕೆ ಇದೆ. ಕುಂದಾಪುರದಲ್ಲಿ ಇಒ, ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಇದೆ. 13 ವರ್ಷ ನಂತರ ಸಾಕಷ್ಟು ಬದಲಾವಣೆಯಾಗಿವೆ. ಬೇರೆ ಜಿಲ್ಲೆಗಳ ಸಮಸ್ಯೆಯೇ ಬೇರೆ, ಇಲ್ಲಿನ ಸವಾಲುಗಳೇ ಬೇರೆ. ಮೊದಲು ಜಿಲ್ಲೆಯ ಸಮಸ್ಯೆಗಳನ್ನು ಅರಿತುಕೊಳ್ಳಬೇಕಿದೆ. ಬಳಿಕ ಪೂರಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

 ರಾಜಕೀಯ ಶಾಸ್ತ್ರದಲ್ಲಿ ಮೂರನೇ ರ‌್ಯಾಂಕ್ ಮೂಲತ ಶಿವಮೊಗ್ಗ ಜಿಲ್ಲೆ ಸೊರಬದವರಾದ ಜಗದೀಶ್ ಅವರು ಸೊರಬದಲ್ಲಿ ಪದವಿ ಶಿಕ್ಷಣ ಪಡೆದು, ಕುವೆಂಪು ವಿವಿಯದಲ್ಲಿ ರಾಜಕೀಯ ಶಾಸ್ತ್ರದಲ್ಲಿ ತೃತೀಯ ರ‌್ಯಾಂಕ್ ಪಡೆದಿದ್ದಾರೆ. ಅದರೊಂದಿಗೆ ಬಿಎಎಡ್ ಶಿಕ್ಷಣ ಪಡೆದು ಕಡೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಸರ್ಕಾರಿ ವೃತ್ತಿ ಜೀವನ ಆರಂಭಿಸಿದ್ದಾರೆ. ಬಳಿಕ ಕೆಎಎಸ್ ಆಯ್ಕೆಯಾಗಿ 2006ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರೊಬೇಷನರಿ ಸೇವೆ, ಸವಣೂರು, ಶಿರಸಿ ಉಪ ವಿಭಾಗಧಿಕಾರಿ, ಮೈಸೂರು, ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳ ಜವಾಬ್ದಾರಿ ನಿರ್ವಹಿಸಿ, ಅರಣ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮತ್ತು ಹಾಸನ ಮತ್ತು ಕೋಲಾರದಲ್ಲಿ ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಎಲ್ಲರೂ ಸಹಕರಿಸಿದ್ದರು ಎಂದ ಹೆಪ್ಸಿಬಾ ತಮ್ಮ ಆಡಳಿತ ಅವಧಿಯಲ್ಲಿ ಅಧಿಕಾರಿ, ಸಿಬ್ಬಂದಿ, ಜನಪ್ರತಿನಿಧಿಗಳು ಉತ್ತಮ ಸಹಕಾರ ನೀಡಿದ್ದರು ಎಂದು ನಿರ್ಗಮನ ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು. ಮಂಗಳವಾರ ಮಣಿಪಾಲ ಡಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಸ್ತೆ, ಸುರಕ್ಷತೆ ನಿರ್ವಹಣೆಗಾಗಿ ಹೊಸ ಯೋಜನೆ, ಟೂರಿಸಂ ಮಾಸ್ಟರ್‌ಪ್ಲಾನ್, ಸ್ವಚ್ಛ್ ಭಾರತ್ ಯೋಜನೆಗಾಗಿ ಗ್ರಾ.ಪಂಗೆ ನೀಡಲು ದೇವಳದಿಂದ ಅನುದಾನ ಸಂಗ್ರಹ, ಸ್ಯಾಂಡ್ ಬಝಾರ್ ಆ್ಯಪ್. ಈಗೆ ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಮೊದಲಾದ ಯೋಜನೆಗಳು ಜಾರಿಗೆ ತರಲು ಸಿದ್ಧತೆ ನಡೆಸಿದ್ದೆವು. ಎಲ್ಲರ ಸಹಕಾರದಿಂದ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲಾಯಿತು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದು ಅತ್ಯಂತ ಸಂತಸ ತಂದಿದೆ. ಸರ್ಕಾರ ತನಗೆ ಇನ್ನೂ ಹುದ್ದೆ ತೋರಿಸಿಲ್ಲ ಎಂದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...