More

    ಇಂತಹ ವರ್ತನೆ ಸರಿಯಲ್ಲ: ವಿನಯ್ ಗುರೂಜಿ ನಡೆ ಖಂಡಿಸಿದ ವಿಧಾನ ಪರಿಷತ್ ಸದಸ್ಯ​​!

    ಚಿತ್ರದುರ್ಗ: ಚಿಕ್ಕಮಗಳೂರಿನ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರ ನಡೆ ಬಗ್ಗೆ ವಿಧಾನಪರಿಷತ್ ಸದಸ್ಯ ಜಿ. ರಘು ಆಚಾರ್ ಅವರು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

    ತಮ್ಮ ಫೇಸ್​ಬುಕ್​ ಮೂಲಕ ವಿನಯ್​ ಗುರೂಜಿಯವರನ್ನು ಟೀಕಿಸಿ, ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಇಂತಹ ವರ್ತನೆ ಸರಿಯಲ್ಲ ಎಂದು ಖಂಡಿಸಿದ್ದಾರೆ.

    ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲು: ಈ ಚಿತ್ರದಲ್ಲಿ ಅಡಗಿರುವ ಬೆತ್ತಲೆ ಮಾಡೆಲ್​ ಗುರುತಿಸುವಿರಾ?

    ರಘು ಆಚಾರ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಸಾರಾಂಶ ಹೀಗಿದೆ…

    ಅಭಿಮಾನಿಗಳಿಂದ ಅವಧೂತರೆನಿಸಿಕೊಂಡಿರುವ ವಿನಯ್ ಗುರೂಜಿ ಗೌರಿಗದ್ದೆ ಅವರಿಗೆ ಬಹಿರಂಗ ಬಿನ್ನಹ. ಇಷ್ಟಕ್ಕೂ ಇಂತಹದೊಂದು ಬಹಿರಂಗ ಬಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ.

    ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ. ಅದರಲ್ಲಿ ಮುಖ್ಯವಾದವು ನಮ್ಮ ಉಸಿರು ಅನ್ಯರಿಗೆ ತಗುಲದಂತೆ ಮಾಸ್ಕ್ ಧರಿಸುವುದು ಹಾಗೂ ನಮ್ಮ ಉಗುಳು ಅನ್ಯರಿಗೆ ತಾಗದಂತೆ ವರ್ತಿಸುವುದು.

    ಶಿವಮೊಗ್ಗದ ಕಾರ್ಯಕ್ರಮದಲ್ಲಿ ಮಹಾಮಹೀಮರಾದ ತಮ್ಮಿಂದ ಹಾಗೂ ತಮ್ಮ ಶಿಷ್ಯರಿಂದ ಈ ಎರಡು ನಿಯಮಗಳ ಬಹಿರಂಗ ಉಲ್ಲಂಘನೆಗೊಂಡು ನಿಜಕ್ಕೂ ಅಚ್ಚರಿ ಹಾಗೂ ಗಾಬರಿ ಮೂಡಿತು. ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದಿರಿ. ಆಶೀರ್ವಾದ ಮಾಡುತ್ತಿದ್ದಿರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.

    ಇದನ್ನೂ ಓದಿ: ಪಕ್ಕದಲ್ಲೇ ಮನೆಯಿದ್ರೂ ಲಾಡ್ಜ್​ನಲ್ಲಿ ರೂಮ್​ ಪಡೆದ ಮಹಿಳೆ: ಸಂಶಯದಿ ಬಾಗಿಲು ತೆರೆದವರಿಗೆ ಕಾದಿತ್ತು ಶಾಕ್​!

    ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕರೊನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ. ಆಗ ಇದು ನಿಮ್ಮ ಗಮನಕ್ಕೆ ಬಂದೇ ನಡೆಯುತ್ತಿದೆ ಎಂದು ಕೇಳ್ಪಟ್ಟೆ. ಇದು ನಿಜಕ್ಕೂ ಆಘಾತ ತರುವಂತಹ ವಿಚಾರ.

    ಕರೊನಾ ಕಾಲದಲ್ಲಿ ನಿಮ್ಮಿಂದ ಇಂತಹ ನಡವಳಿಕೆಯನ್ನು ನಾನು ನಿರೀಕ್ಷಿಸಿರಲಿಲ್ಲ. ನಿಮ್ಮ ಬಗ್ಗೆ ಅಪಾರ ಗೌರವ ಹೊಂದಿದ್ದರೂ ಜನರ ಜೀವಕ್ಕೆ ಅಪಾಯ ತರುವಂತಹ ಆ ಬೇಜವಾಬ್ದಾರಿ ನಡವಳಿಕೆಯನ್ನು ಖಂಡಿಸದೆ ನನಗೆ ಬೇರೆ ವಿಧಿಯಿಲ್ಲ. ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

    ಅಭಿಮಾನಿಗಳಿಂದ ಅವಧೂತರೆನಿಸಿಕೊಂಡಿರುವ ವಿನಯ್ ಗುರೂಜಿ ಗೌರಿಗದ್ದೆ • Vinay guruji Followersನಿಮಗೊಂದು ಬಹಿರಂಗ ಬಿನ್ನಹ.. …

    Posted by G Raghu Achar on Tuesday, August 18, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts