More

    ಸೇವಾ ಮನೋಭಾವದಿಂದ ಸಮಾಜ ಪರಿವರ್ತನೆ

    ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರು, ಮುಖಂಡರು, ಯುವಸಮೂಹ ಸೇವಾ ಮನೋಭಾವ ಮೈಗೂಡಿಸಿಕೊಂಡರೆ ಸಮಾಜ ಪರಿವರ್ತನೆ ಸಾಧ್ಯವಿದೆ ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

    ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್‍, ಬಿಜೆಪಿ ಯುವಮುಖಂಡ ಜಿ.ಎಸ್.ಅನಿತ್‍ಕುಮಾರ್ ಜನ್ಮದಿನದ  ಅಂಗವಾಗಿ ಹಮ್ಮಿಕೊಂಡಿದ್ದ ಸೇವಾ ಪಾಕ್ಷಿಕ, ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರ, ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ನನ್ನ ತಂದೆ, ತಾಯಿ ಹೆಸರಿನಲ್ಲಿ ಸ್ಥಾಪಿಸಿರುವ ಟ್ರಸ್ಟ್‌ನಿಂದ ಪ್ರತಿ ವರ್ಷ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಮಕ್ಕಳಿಗೆ ಉಚಿತ ನೋಟ್‌ಬುಕ್, ಪುಸ್ತಕ, ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ, ಉಚಿತ ಆರೋಗ್ಯ ತಪಾಸಣೆ ಇತರೆ ಹೀಗೆ ಅನೇಕ ಕಾರ್ಯಕ್ರಮ ಆಯೋಜನೆ ಮೂಲಕ ಸಾಮಾಜಿಕ ಕಾರ್ಯದಲ್ಲಿ ನಿರತನಾಗಿದ್ದೇನೆ. ಇದೇ ರೀತಿ ಪಕ್ಷದ ಯುವ ಮುಖಂಡರು ಜನರ ನೋವಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

    ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಅ. 2ರಂದು ಜಿಲ್ಲಾಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ ಎಂದರು. ಇದೇ ವೇಳೆ  ಬೆಂಗಳೂರಿನ ಜಿ.ಎಂ.ಆಸ್ಪತ್ರೆ, ದೃಷ್ಟಿ ಕಣ್ಣಿನ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಕೀರ್ತಿ ಆಸ್ಪತ್ರೆ ವೈದ್ಯರು ಉಚಿತ ಆರೋಗ್ಯ ತಪಾಸಣೆ ನಡೆಸಿದರು.

    ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಜಿ.ನರೇಂದ್ರನಾಥ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‌ ಸಿದ್ದಾಪುರ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿ ನಾಗರಾಜ್, ಮುಖಂಡರಾದ ಚಂದ್ರಿಕಾ ಲೋಕನಾಥ್, ರಘುಚಂದನ್, ಮಾಧುರಿ ಗಿರೀಶ್, ನರೇಂದ್ರ, ಸಂಪತ್, ಜೈಪಾಲ್, ನವೀನ್ ಚಾಲುಕ್ಯ, ಶೈಲಜಾರೆಡ್ಡಿ, ಮಂಜುಳಮ್ಮ, ನಗರಸಭೆ ಸದಸ್ಯ ಭಾಸ್ಕರ್ ಇತರರಿದ್ದರು.

    Attachments area

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts