18 C
Bangalore
Thursday, December 5, 2019

ವೆಂಕಟಸುಬ್ಬಯ್ಯ, ನಾಗರಾಜಪ್ಪರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ನವದೆಹಲಿ: ರಾಜ್ಯದ ಹಿರಿಯ ಸಾಹಿತಿ ಕೆ.ಜಿ. ನಾಗರಾಜಪ್ಪ ಅವರ ಚಿಂತನಶೀಲ ಬರಹ ಮಾಲಿಕೆ ‘ಅನುಶ್ರೇಣಿ-ಯಜಮಾನಿಕೆ’ ವಿಮರ್ಶಾ ಕೃತಿ 2018-19ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಹಿತ್ಯ ಕ್ಷೇತ್ರದ ಸಮಗ್ರ ಸಾಧನೆ ಪರಿಗಣಿಸಿ ರಾಜ್ಯದ ಮತ್ತೋರ್ವ ಹಿರಿಯ ಲೇಖಕ, ಭಾಷಾ ಶಾಸ್ತ್ರಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ದಕ್ಷಿಣಭಾರತ ವಿಭಾಗಕ್ಕೆ ನೀಡಲಾಗುವ ‘ಭಾಷಾ ಸಮ್ಮಾನ್’ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 1 ಲಕ್ಷ ರೂ. ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿವೆ.

ದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಕಾರ್ಯದರ್ಶಿ ಕೆ. ಶ್ರೀನಿವಾಸ ರಾವ್ ಮಾಹಿತಿ ನೀಡಿ, 24 ಭಾಷೆಗಳ ಕೃತಿಗಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿವೆ.

ಜ. 29ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದರು. ಲೇಖಕರಾದ ಪ್ರೊ. ಬಸವರಾಜ ಪಿ. ಡೋಣೂರ, ಚಿದಾನಂದ ಸಾಲಿ ಮತ್ತು ಡಾ. ತಾರಿಣಿ ಶುಭದಾಯಿನಿ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿ ಅಕಾಡೆಮಿ ಪ್ರಶಸ್ತಿಗೆ ಕೆ.ಜಿ. ನಾಗರಾಜಪ್ಪನವರ ಕೃತಿ ಆಯ್ಕೆ ಮಾಡಿ, ಅಕಾಡೆಮಿಗೆ ಶಿಫಾರಸು ಮಾಡಿತ್ತು.

ಬೆಂಗಳೂರಿನಲ್ಲಿ ಅಕಾಡೆಮಿ ಕಟ್ಟಡ: ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಭಾರತದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಈ ಸಂಬಂಧ 20 ಕೋಟಿ ರೂ. ಬಿಡುಗಡೆಗೂ ಸಮ್ಮತಿ ಸೂಚಿಸಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರ ವಿಜಯವಾಣಿಗೆ ತಿಳಿಸಿದ್ದಾರೆ. ಸದ್ಯ ಬೆಂಗಳೂರಿನ ಸೆಂಟ್ರಲ್ ಲೈಬ್ರೆರಿಯಲ್ಲಿ ಸಾಹಿತ್ಯ ಅಕಾಡೆಮಿ ಕೇಂದ್ರವಿದ್ದು, ಸ್ವಂತ ಕಟ್ಟಡವಿಲ್ಲ. ಸ್ವಂತ ಕಟ್ಟಡವಿದ್ದರೆ ಸಮರ್ಪಕ ಮೂಲಸೌಕರ್ಯವೂ ಸಿಕ್ಕಂತಾಗುತ್ತದೆ ಎಂದು ಕೇಂದ್ರಕ್ಕೆ ವಿವರಿಸಿದ್ದೆವು. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಗಳೂರು ವಿಶ್ವವಿದ್ಯಾಲಯದ ಹಿಂಬದಿ 1 ಎಕರೆ ಜಾಗವನ್ನು ಕಟ್ಟಡ ನಿರ್ವಣಕ್ಕೆ ನೀಡುವುದಾಗಿ ಭರವಸೆ ನೀಡಿತ್ತು. ಈಗ ಕೇಂದ್ರ ಸರ್ಕಾರ ಹಣ ಬಿಡುಗಡೆಗೂ ಸಮ್ಮತಿಸಿದ್ದರಿಂದ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು. ಹೊಸ ಕಟ್ಟಡದಿಂದಾಗಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ತುಳು ಸೇರಿ ದಕ್ಷಿಣ ಭಾರತದ ಭಾಷೆಗಳ ಸಾಹಿತ್ಯ ಚಟುವಟಿಕೆಗಳು ಮತ್ತಷ್ಟು ಚುರುಕಿನಿಂದ ನಡೆಯಲಿವೆ ಎಂದು ಕಂಬಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪರೇಶ್​ಗೂ ಪುರಸ್ಕಾರ: ಕೊಂಕಣಿ ಭಾಷಾ ಕವಿ ಪರೇಶ್ ಕಾಮತ್ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಗೋವಾ ಪಣಜಿಯವರಾದ ಇವರು ‘ಅಲಂಗ್’, ‘ಗಾರ್ಭಕೋಲ್’, ‘ಶುಭಂಕರ್’, ‘ಚಿತ್ರಲಿಪಿ’ ಮುಂತಾದ ಹೆಸರಾಂತ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.

ಕೇಂದ್ರ ಸರ್ಕಾರ ನನ್ನ ಕೆಲಸ ಗುರುತಿಸಿ, ಭಾಷಾ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಅತೀವ ಸಂತೋಷವನ್ನು ಉಂಟುಮಾಡಿದೆ. 105ರ ಇಳಿ ವಯಸ್ಸಿನಲ್ಲಿ ಯಾವುದೇ ಪ್ರಶಸ್ತಿಯ ನಿರೀಕ್ಷೆ ಇರಲಿಲ್ಲ. ಜೀವನದ ಬಹುತೇಕ ಸಮಯವನ್ನು ಸಾಹಿತ್ಯ ಕೃಷಿಯಲ್ಲೇ ಕಳೆದಿದ್ದು, ಇಂಥ ಪ್ರಶಸ್ತಿಗಳು ಸಾರ್ಥಕ ಭಾವನೆ ಮೂಡಿಸುತ್ತವೆ.

| ಪ್ರೊ.ಜಿ. ವೆಂಕಟಸುಬ್ಬಯ್ಯ ಹಿರಿಯ ಸಾಹಿತಿ

ಬಡಕುಟುಂಬದಲ್ಲಿನ ಒಂಟಿಸಲಗ

ತುಮಕೂರು: ಖಂಡಿತವಾದಿ, ಒಂಟಿಸಲಗ ಅಂತ ಕರೆಸಿಕೊಳ್ಳುವ ಪ್ರೊ.ಕೆ.ಜಿ. ನಾಗರಾಜಪ್ಪ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರಿನವರು. ರಹಸ್ಯಪಂಥಗಳು, ಮಾಲಿನಿ ವಿಜಯೋತ್ಸವ ತಂತ್ರ, ಅಂಬೇಡ್ಕರ್ ನಂತರ ವಿಮೋಚನ ಚಳವಳಿಗಳು, ತಮಿಳು ಶೈವ ಮತ್ತು ಹರಿಹರ, ಜಿಎಸ್​ಎಸ್ ಸಾಹಿತ್ಯದ ವೈಚಾರಿಕ ನೆಲೆಗಳು, ಭೈರಪ್ಪನವರ ಸ್ವಾರ್ಥ- ಒಂದು ತಾತ್ವಿಕ ಚಿಂತನೆ, ಶಾಸ್ತ್ರ ಸಂಪ್ರದಾಯ ಹಾಗೂ ಅಲ್ಲಮಪ್ರಭು ಅವರ ವಿಮರ್ಶಾತ್ಮಕ ಲೇಖನಗಳು. ಪ್ರೊ.ಕೆಜಿಎನ್ ಕನ್ನಡ ಸಾಹಿತ್ಯ ಲೋಕದ ಅತ್ಯಂತ ಕಟು ವಿಮರ್ಶಕರಲ್ಲೊಬ್ಬರೆನಿಸಿದ್ದಾರೆ. 1994ರಲ್ಲಿ ಚನ್ನಪಟ್ಟಣದ ಶ್ರೀ ಕುವೆಂಪು ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾಗಿದ್ದರು.

ಹತ್ತು ಹಲವು ಪ್ರಶಸ್ತಿ: ನಾಡೋಜ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸೇರಿ ಹಲವು ಪ್ರಶಸ್ತಿಗಳು ಪ್ರೊ.ಕೆಜಿಎನ್ ಅವರ ಮುಡಿಗೇರಿವೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...