

ನವದೆಹಲಿ: ಬಹುನಿರೀಕ್ಷಿತ ಜಿ-20 ನಾಯಕರ ಶೃಂಗಸಭೆ ಇಂದಿನಿಂದ (ಸೆ.09) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭವಾಗಿದೆ. ಮೊದಲ ಬಾರಿಗೆ ಭಾರತದಲ್ಲಿ ನಡೆಯುತ್ತಿದ್ದು, ಇದು ಭಾರತದ ಪಾಲಿಗೆ ಪ್ರತಿಷ್ಠಿತ ಕಾರ್ಯಕ್ರಮವಾಗಿದೆ. ವಿಶ್ವದ 20 ಪ್ರಮುಖ ಆರ್ಥಿಕತೆಯ ನಾಯಕರು ಇಂದು ಮತ್ತು ನಾಳೆ ಒಟ್ಟುಗೂಡಲಿದ್ದಾರೆ. ಈ ಸಭೆ ಇಂಟರ್ನ್ಯಾಷನಲ್ ಎಕ್ಸಿಬಿಷನ್ ಕನ್ವೆನ್ಷನ್ ಸೆಂಟರ್‌ನ ಭಾರತ ಮಂಟಪಂನಲ್ಲಿ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಹವಾಮಾನ ಬದಲಾವಣೆ, ಸಾಲ, ಆಹಾರ ಭದ್ರತೆ, ಸುಸ್ಥಿರತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷದ ಬಗ್ಗೆ ಚರ್ಚೆಗಳಾಗಲಿದೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಥೀಮ್ನೊಂದಿಗೆ ಭಾರತ ಶೃಂಗಸಭೆಯನ್ನು ಆಯೋಜಿಸಿದ್ದು, ಅದರ ನೇರಪ್ರಸಾರವನ್ನು ಮೇಲಿನ ಯೂಟ್ಯೂಬ್ ಲಿಂಕ್ ಮೂಲಕ ವೀಕ್ಷಣೆ ಮಾಡಬಹುದಾಗಿದೆ.