ಗದಗ: ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಹೈಬ್ರೀಡ್ ಬಿಳಿಜೋಳ ಪ್ರತಿ ಕ್ವಿಂಟಾಲ್ ಗೆ 3371 ರೂ, ಹಾಗೂ ಮಾಲ್ದಂಡಿ ಬಿಳಿಜೋಳ ಪ್ರತಿ ಕ್ವಿಂಟಾಲ್ ಗೆ 3421 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳೀದರು.
ಗುರುವಾರ ಜಿಲ್ಲಾಡಳೀತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಅಧಿಕಾರಿಗಳು ಶ್ರಮ ವಹಿಸಬೇಕು. ಸರ್ಕಾರದ ಮಾನದಂಡಗಳ ಅನ್ವಯ ಗುಣಮಟ್ಟವನ್ನು ಧೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು, ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್ಗಳನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, ಸರ್ಕಾರದ ಆದೇಶದನ್ವಯ ಮುಂಗಾರು ಋತುವಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆದೇಶಿಸಿದೆ. ಡಿ.1 ರಿಂದ ನೋಂದಣಿ ಕಾರ್ಯ ಆರಮಭಗೊಳ್ಳುವುದು. ಜ.1, 2025 ರಿಂದ ಮಾರ್ಚ 31, 2025 ರ ಅವಧಿಯಲ್ಲಿ ಖರೀದಿ ಪ್ರಕ್ರಿಯೆ ಜರುಗಿಸಲಾಗುವುದು ಎಂದರು. ಗದಗ, ಲೆ$್ಮಶ್ವರ, ಮುಂಡರಗಿ, ರೋಣ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯುವಂತೆ ಸಭೆಯಲ್ಲಿ ಸೂಚಿಸಲಾಯಿತು. ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.