More

    ಬಸವೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭ

    ಗದಗ: ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವದ ಅಂಗವಾಗಿ ಲಕ್ಷ್ಮೇಶ್ವರದ ಲಿಂಬಯ್ಯಸ್ವಾಮಿ ಪ್ರತಿಭಾ ಪ್ರತಿಷ್ಠಾನದ ವತಿಯಿಂದ ಮೇ 10ರಂದು ನಗರದ ಜಗದ್ಗುರು ತೋಂಟದಾರ್ಯ ಮಠದಲ್ಲಿ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಲಿಂಬಯ್ಯಸ್ವಾಮಿಮಠ ತಿಳಿಸಿದರು. 

    ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಮೇ 10ರಂದು ಬೆಳಿಗ್ಗೆ 9ಕ್ಕೆ ತೋಂಟದಾರ್ಯ ಮಠದಿಂದ ಭವ್ಯ ಮೆರವಣಿಗೆ ನಡೆಯಲಿದೆ’ ಎಂದು ತಿಳಿಸಿದರು. 

    ‘ಮೇ 10ರಂದು ಸಂಜೆ 7.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಶಿವಮೊಗ್ಗದ ಡಾ. ಪುಟ್ಟರಾಜ ಕವಿ ಗವಾಯಿಗಳ ಉಚಿತ ಸಂಗೀತ ಮತ್ತು ಸಂಸ್ಕೃತ ಪಾಠಶಾಲೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ.ವಿ.ಪರಶಿವಮೂರ್ತಿ ‘ಮಾನವತಾವಾದಿ ಬಸವೇಶ್ವರ ಪ್ರಶಸ್ತಿ’ ಪ್ರದಾನ ಮಾಡುವರು. ಪ್ರಶಸ್ತಿಯು ₹1 ಲಕ್ಷ ನಗದು, ಫಲಕಗಳನ್ನು ಒಳಗೊಂಡಿರಲಿದೆ’ ಎಂದು ತಿಳಿಸಿದರು. 

    ಇದೇ ಸಂದರ್ಭದಲ್ಲಿ ಡಾ. ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಪ್ರಕಟಿಸಿರುವ ಡಾ. ಶಿವಾನಂದ ವಿರಕ್ತಮಠ ಅವರು ರಚಿಸಿರುವ ‘ಪ್ರೌಢದೇವರಾಯನ ಕಾಲದ ಕನ್ನಡ ಸಾಹಿತ್ಯ’ ಗ್ರಂಥ ಲೋಕಾರ್ಪಣೆಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ರೇವಣಸಿದ್ಧಯ್ಯ ಮರಿದೇವರಮಠ ಹಾಗೂ ಸಂಗಡಿಗರಿಂದ ವಚನ ಸಂಗೀತ ಪ್ರಸ್ತುತಗೊಳ್ಳಲಿದೆ ಎಂದು ತಿಳಿಸಿದರು. 

    ಬಸವ ಜಯಂತಿ ಅಂಗವಾಗಿ ಮೇ 11ರಂದು ಸಂಜೆ 7.30ಕ್ಕೆ ಧಾರವಾಡ ವಿಜಯಕುಮಾರ ಕಮ್ಮಾರ ಅವರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ಎಸ್‌.ಎಸ್‌.ಪಾಟೀಲ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು. 

    ಮೃತ್ಯುಂಜಯ ಹಿರೇಮಠ ಮತ್ತು ಗುರುನಾಥ ಸುತಾರ ಅವರಿಂದ ವಚನ ಸಂಗೀತ ಹಾಗೂ ರಾಜೇಶ್ವರಿ ಕಲಾಕುಟೀರದ ವಿದ್ಯಾರ್ಥಿಗಳಿಂದ ವಚನ ವೈಭವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts