More

    ದೇಶದ್ರೋಹಿಗಳನ್ನು ಗಲ್ಲಿಗೇರಿಸಿ; ಬಿಜೆಪಿ ಆಗ್ರಹ

    ಶಕ್ತಿಸೌಧದಲ್ಲಿ ಪಾಕ್‌ ಪರ ಘೋಷಣೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    ಗದಗ: ರಾಜ್ಯಸಭಾ ಚುನಾವಣಾ ಫಲಿತಾಂಶದ ವೇಳೆ ವಿಧಾನಸೌಧದ ಕಾರಿಡಾರ್‌ನಲ್ಲಿ ಕಿಡಿಗೇಡಿಯೊಬ್ಬ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ ಕೂಗಿದ್ದನ್ನು ಖಂಡಿಸಿ ಗದಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತ

    ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಿಡಿಗೇಡಿಯನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.

    ‘‍ಭಾರತ ದೇಶದ ನೀರು ಕುಡಿದು, ಅನ್ನ ತಿಂದು ಪಾಕಿಸ್ತಾನ್‌ ಜಿಂದಾಬಾದ್ ಎನ್ನುವುದು ದೇಶದ್ರೋಹದ ಕೆಲಸ. ರಾಜ್ಯದ ಶಕ್ತಿಸೌಧದಲ್ಲಿ ಈ ಘಟನೆ ನಡೆದಿರುವುದು ಆಘಾತಕಾರಿ ವಿಷಯ. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್‌ ಅಭ್ಯರ್ಥಿ ಸೈಯದ್‌ ನಾಸಿರ್‌ ಹುಸೇನ್‌ ಬೆಂಬಲಿಗರ ಈ ಕೃತ್ಯವನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ’ ಎಂದು ಪ್ರತಿಭಟನಕಾರರು ಕಿಡಿಕಾರಿದರು.

    ‘ಇಷ್ಟೇ ಅಲ್ಲದೇ ನೂತನವಾಗಿ ಆಯ್ಕೆಯಾದ ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌ ಅವರು ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ್ದು ತನಗೆ ಕೇಳಿಸಿಲ್ಲ ಎಂದು ಹೇಳುವ ಮೂಲಕ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ತಕ್ಷಣವೇ ಕ್ರಮ ಕೈಗೊಂಡು ಕಿಡಿಗೇಡಿಯನ್ನು ಬಂಧಿಸಿ, ಗಲ್ಲಿಗೇರಿಸಬೇಕು. ಇಲ್ಲವಾದಲ್ಲಿ, ಸದಾಕಾಲ ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡುತ್ತಲೇ ಬಂದಿರುವ ಕಾಂಗ್ರೆಸ್‌ ಪಕ್ಷ ರಾಷ್ಟ್ರದಾದ್ಯಂತ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ’ ಎಂದು ಎಚ್ಚರಿಸಿದರು.

    ಬಿಜೆಪಿ ಮುಖಂಡರಾದ ಶ್ರೀಪತಿ ಉಡುಪಿ, ವಿಜಯ್‌ಕುಮಾರ್‌ ಗಡ್ಡಿ, ಎಂ.ಎಸ್‌.ಕರಿಗೌಡ್ರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ರಾಘವೇಂದ್ರ ಯಳವತ್ತಿ, ಅನಿಲ್‌ ಅಬ್ಬಿಗೇರಿ, ವಿಜಯಲಕ್ಷ್ಮೀ ಮಾನ್ವಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts