ಗದಗ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆ ಅಡಿ 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ಇರುವ ಗದಗ ತಾಲೂಕಿನ ಮುಂಗಾರು ಹಂಗಾಮಿನ 27 ಹಾಗೂ ಹಿಂಗಾರು ಹಂಗಾಮಿನ 1570 ಒಟ್ಟಾರೆ 1597 ಬೆಳೆ ವಿಮೆ ಪ್ರಸ್ತಾವನೆಗಳನ್ನು ಅಂತಿಮವಾಗಿ ವಿಮಾ ಸಂಸ್ಥೆಯವರು ತಿರಸ್ಕರಿಸಿರುತ್ತಾರೆ. ಅಂತಹ ಪ್ರಸ್ತಾವನೆಗಳ ಮಾಹಿತಿಯನ್ನು ಆಯಾ ರೈತ ಸಂಪರ್ಕ ಕೇಂದ್ರಗಳ/ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದ್ದು, ರೈತರು ತಮ್ಮ ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಈ ಕೆಳಕಂಡ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
2023-24 ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಮೂದಾದ ಬೆಳೆಯ ಉತಾರ ಅಥವಾಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಮಾರಾಟ ಮಾಡಿದ್ದರೆ ಅದರ ರಸೀದಿ ಅಥವಾ ಎ.ಪಿ.ಎಮ್.ಸಿ ಯಲ್ಲಿ ಸದರಿ ಬೆಳೆ ಮಾರಾಟ ಮಾಡಿದ್ದರ ರಸೀದಿ ಫೆಬ್ರುವರಿ 28 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಗದಗ ಕಚೇರಿಗೆ ಮೇಲ್ಕಂಡ ದಾSಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ಹುಲಕೋಟಿ/ಬೆಟಗೇರಿ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಗದಗ ಇವರನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರಾದ ಮಲ್ಲಯ್ಯ ಕೊರವನವರÀ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.