ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ: ರಾಜ್ಯದಲ್ಲಿ ಬಡತನ ನಿರ್ಮೂಲನೆಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದ ಬಡವರ ಬಾಳಲ್ಲಿ ಅಗಾಧವಾದ ಆರ್ಥಿಕ ಸ್ವಾವಲಂಬನೆ ಮೂಡುವುದರೊಂದಿಗೆ ಕ್ರಾಂತಿಕಾರಕ ಬದಲಾವಣೆ ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಯ ಅನುಷ್ಟಾನದಿಂದ 1.10 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಲಾಗಿದೆ. ಬಡಜನರಿಗೆ ಆತ್ಮಾಭಿಮಾನ, ಸ್ವಾಭಿಮಾನ ಕುದುರಿಸುವ ಕೆಲಸವಾಗಿದೆ ಎಂದರು.

ಉಳಿದ ಅರ್ಹರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಭ್ರಷ್ಟಾಚಾರವಿಲ್ಲದೇ ಜನರಿಗೆ ತಲುಪಿಸುವ ಕೆಲಸ ಮಾಡಿದೆ. ಇದು ಸರ್ಕಾರದ ಮಹತ್ಸಾಧನೆಯಾಗಿದೆ ಎಂದು ಹೇಳಿದರು.

ಪಂಚಗ್ಯಾರAಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷಿö್ಮ , ಅನ್ನಭಾಗ್ಯ, ಶಕ್ತಿ , ಯುವನಿಧಿ ಯೋಜನೆಗಳು 100 % ರಷ್ಟು ಸಾಧನೆಯಾಗಬೇಕು. ಈ ನಿಟ್ಟಿನಲ್ಲಿ ಸಂಬAಧಿತ ಅಧಿಕಾರಿಗಳು ಸೇವಾ ಮನೋಭಾವದಿಂದ ಯೋಜನೆಯ ಸೌಲಭ್ಯ ಮನೆಮನೆಗೆ ತಲುಪಿಸುವ ಕೆಲಸವಾಗಬೇಕು. ಯೋಜನೆಗಳ ಸೌಲಭ್ಯಗಳ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಾನವ ಸರಪಳಿ ಕಾಯರ್ತಕ್ರಮದಲ್ಲಿ ಗದಗ ಜಿಲ್ಲೆ ಮುಂಚೂಣಿಯಲ್ಲಿದ್ದುದು ಸಂತಸದ ವಿಷಯವಾಗಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿಯೂ ಸಹ ಜಿಲ್ಲೆಯು ಅಗ್ರ ಸ್ಥಾನದಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಸಚಿವ ಡಾ.ಎಚ್.ಕೆ.ಪಾಟೀಲ ನಿರ್ದೇಶನ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗದಗ ತಾಲೂಕ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಮಾತನಾಡಿ ರಾಜ್ಯ ಸರ್ಕಾರ ಬಡಜನರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳಿಗೆ 5 ಸಾವಿರಗಳಂತೆ ವಾರ್ಷಿಕ 60,000/- ರೂ. ಅರ್ಹ ಫಲಾನುಭವಿಯ ಖಾತೆ ನೇರವಾಗಿ ಜಮಾ ಮಾಡುವ ಉದ್ದೇಶ ಈ ಯೋಜನೆಯದಾಗಿದೆ. ಜಿಲ್ಲೆಯಲ್ಲಿ ಪ್ರಥಮ ತಾಲುಕಾ ಮಟ್ಟದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಗದಗ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರಲು ಎಲ್ಲರು ಶ್ರಮಿಸೋಣ ಎಂದರು.

ಗೃಹಜ್ಯೊತಿ ಯೋಜನೆಯಡಿ ಗದಗ ಗ್ರಾಮಿಣ ಉಪವಿಭಾಗದಲ್ಲಿ 52909 ಸ್ಥಾವರಗಳು ಹಾಗೂ ಶಹರ ವಿಭಾಗದಲ್ಲಿ 45024 ಸ್ಥಾವರಗಳ ನೋಂದಣಿ ಮೂಲಕ ಶೇ. 92.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.

ಗದಗ ತಾಲೂಕಿನ ಯಜಮಾನಿ ಕಾರ್ಡ ಹೊಂದಿರುವವರ ಸಂಖ್ಯೆ ಒಟ್ಟು 78009 ಇದು ಆ ಪೈಕಿ 77611 ಫಲಾನುಭವಿಗಳ ನೋಂದಣಿಯಾಗಿದೆ. 76291 ಫಲಾನುಭವಿಗಳಿಗೆ ಡಿಬಿಟಿ ಮೂಲಕ ಖಾತೆಗೆ ನೇರ ಪಾವತಿಸಲಾಗುತ್ತಿದೆ. ಎನ್‌ಪಿಸಿಐ ವಿಫಲ ವರದಿ ( ಜಿಎಸ್ ಟಿ/ ಐಟಿ ತೊಂದರೆಗಳಿAದ 1320 ಅರ್ಜಿಗಳು ಬಾಕಿ ಉಳಿದಿವೆ ಎಂದು ಗದಗ ಸಿಡಿಪಿಒ ಹುಲಿಗೆಮ್ಮ ಜೋಗೇರ ಸಭೆಗೆ ಮಾಹಿತಿ ಒದಗಿಸಿದರು.

ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ನಗದು ವರ್ಗಾವಣೆಯನ್ನು ಜುಲೈ-2023 ರಿಂದ ಆರಂಭಿಸಲಾಯಿತು. ಪ್ರತಿ ಸದಸ್ಯರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಮೊತ್ತ 170 ರಂತೆ 6,43,423 ಜನರಿಗೆ ಜುಲೈ-2023 ರಲ್ಲಿ ಪಾವತಿಸಲಾಯಿತು. ನಂತರ ನಿರಂತರವಾಗಿ ಪ್ರತಿ ತಿಮಗಳು ಪಾವತಿಸಲಾಗುತ್ತಿದೆ. ಜೂನ್ 2024 ರಲ್ಲಿ 7,59,604 ಸದಸ್ಯರಿಗೆ ಡಿಬಿಟಿ ಮುಲಕ ಹೆಚ್ಚುವರಿ ಅಕ್ಕಿಯ ಮೊತ್ತವನ್ನು ಪಾವತಿಸಲಾಗಿದೆ ಎಮದು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಿಂದ ವಾ.ಕ.ರಾ.ಸಂಸ್ಥೆಯ ಗದಗ ವಿಭಾಗಕ್ಕೆ ಸೆಪ್ಟೆಂಬರ್ 2024 ರವರೆಗೆ 65,46,66,516 ರೂ. ಆದಾಯ ಹೊಂದಿದೆ. ಒಟ್ಟಾರೆ ಮಹಿಳಾ ಫಲಾನುಭವಿಗಳಿಂದ 36,78,23,531 ಆದಾಯವಾಗಿದೆ ಎಂದು ಸಭೆಗೆ ತಿಳಿಸಿದರು.

ಯುವ ನಿಧಿ ಯೋಜನೆ; 2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳು ಸೇರಿದಂತೆ ಎಲ್ಲ ವಿಧದ ಪದವೀಧರ ಯುವಕ-ಯುವತಿಯರು ಡಿಪ್ಲೊಮಾ ಹೊಂದಿದವರಿಗೆ ಈ ಯೊಜನೆ ಅನ್ವಯವಾಗುತ್ತದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023 ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿAದ 180 ದಿನ ಕಳೆದರೂ ಉದ್ಯೊಗ ಲಭಿಸದ ಪದವೀಧರ ನಿರುದ್ಯೋಗಿಗಲಿಗೆ ಪ್ರತಿ ತಿಂಗಳು 3,000/ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಯುವನಿಧಿ ಯೋಜನೆಯಡಿ ಇದುವರೆಗೆ 1171 ಅಭ್ಯರ್ಥಿಗಳ ನೋಂದಣಿಯಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶಂಭು ಎಸ್ ಕಾಳೆ, ಮೀನಾಕ್ಷಿ ಬೆನಕಣ್ನವರ, ದಯಾನಂದ ಪವಾರ, ಸಂಗು ಕರಕಲಕಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ್, ಮಲ್ಲಪ್ಪ ಬಾರಕೇರ, ಬಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್.ಪಾಟಿಲ, ಸಾವಿತ್ರಿ ಹೂಗಾರ ಸೇರಿದಂತೆ ಗ್ಯಾರಂಟಿ ಯೋಜನೆಯ ಸಂಬAಧಿತ ಅಧಿಕಾರಿಗಳು ಹಾಜರಿದ್ದರು.

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…