ಮನುಕುಲದ ಉದ್ಧಾರಕ್ಕೆ ದಾರಿ ತೋರಿದ ಸಾದ್ವಿ

blank

ಗದಗ: ಜಾತಿ, ಮತ ಎಂದು ಭೇದಭಾವ ಮಾಡದೇ ಮನುಕುಲದ ಉದ್ಧಾರಕ್ಕೆ ದಾರಿ ತೋರಿದ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರಿಗೆ ನಾವೆಲ್ಲರೂ ಸದಾ ಚಿರಋಣಿಯಾಗಿರಬೇಕು ಎಂದು ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ನಗರದ ಶಿವಾನಂದ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಾರ್ಶನಿಕ, ತತ್ವಜ್ಞಾನಿ ಮಹಾಯೋಗಿ ವೇಮನ ಅವರನ್ನು ತಿದ್ದುವ ಮೂಲಕ ಸಮಾಜಕ್ಕೆ ವೇಮನರಂತಹ ತತ್ವಜ್ಞಾನಿಯನ್ನು ನೀಡಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಅತಿಥಿ ಸತ್ಕಾರ, ಹಸಿವು ನಿಗಿಸುವ ಕಾರ್ಯದಲ್ಲಿ ಸದಾ ಮುಂದಿರುವ ರೆಡ್ಡಿ ಸಮುದಾಯ ಯಾವಾಗಲೂ ನ್ಯಾಯಪರ ಹೋರಾಟಲ್ಲಿ ಮುಂಚೂಣಿಯಲ್ಲಿದೆ ಎಂದರು.
ಮಹನೀಯರ ಜಯಂತಿಗಳು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಆಗಬಾರದು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು. ಹೇಮರಡ್ಡಿ ಮಲ್ಲಮ್ಮ, ವೇಮನರ ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದರು.
ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಕುಟುಂಬಗಳು ಒಗ್ಗಟ್ಟಿನಿಂದ ಹೇಗೆ ಸಾಗಬೇಕು ಎಂಬ ಪರಿಪಾಠವನ್ನು ಕಲಿಸಿದ ಹೇಮರಡ್ಡಿ ಮಲ್ಲಮ್ಮ ಅವರು ಸಂಸಾರದಲ್ಲಿ ಬರುವ ಕಷ್ಟಗಳನ್ನು ಎದುರಿಸಲು ಸೂಕ್ತ ಮಾರ್ಗದರ್ಶನ ಮಾಡಿದ್ದಾರೆ ಎಂದರು.
ವಿಪ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮನಂಥ ಮಹನೀಯರ ಆದರ್ಶಗಳನ್ನು ಮೆಲುಕು ಹಾಕುವುದರ ಮೂಲಕ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಸಂಪನ್ಮೂಲ ವ್ಯಕ್ತಿ ವೀಣಾ ತಿರ್ಲಾಪುರ ಮಾತನಾಡಿ, ಪತಿಯಲ್ಲಿ ಪರಮಾತ್ಮನನ್ನು ಕಂಡ ಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ. ಶಿವ-ಪಾರ್ವತಿಯರ ಮಹಾನ್ ಭಕ್ತೆಯಾಗಿದ್ದ ಹೇಮರಡ್ಡಿ ಮಲ್ಲಮ್ಮ ಭೂಲೋಕದಲ್ಲಿ ಸತ್ಯ, ಧರ್ಮ ಉಳಿಸಲು ಧರೆಗೆ ಬಂದ ಶರಣೆಯಾಗಿದ್ದಳು ಎಂದರು.
ಡಿಸಿ ಸಿ.ಎನ್. ಶ್ರೀಧರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್ಲ, ಸಿಇಒ ಭರತ ಎಸ್., ಎಸ್​ಪಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಜಿಲ್ಲಾ ರಡ್ಡಿ ಸಮಾಜದ ಅಧ್ಯಕ್ಷ ರವೀಂದ್ರ ಮೂಲಿಮನಿ, ಸಮಾಜದ ಗಣ್ಯರು, ಮುಖಂಡರು, ಸಾರ್ವಜನಿಕರು ಇದ್ದರು.

blank

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank