ಹಿರೇಗಾಳ ಗ್ರಾಮದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಕ್ಕೆ ಚಾಲನೆ

ಗದಗ: ಪ್ರತಿಯೊಬ್ಬರು ನಿಮ್ಮ ಮನೆ ಹಾಗೂ ನಿಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟಾಗ ಮಾತ್ರ ನಿಮ್ಮ ಗ್ರಾಮ ಸುಂದರವಾಗಿ ಕಾಣಲು ಸಾಧ್ಯ ಹಾಗಾಗಿ, ತಾವೆಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ ಅಂತಾ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಹೇಳಿದರು….

ರೋಣ ತಾಲೂಕಿನ ಹಿರೇಹಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿಯಲ್ಲಿ ಸ್ವಚ್ಛತಾ ಹಿ ಸೇವಾ ಜನಾಂದೋಲನಾ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಈ ವರ್ಷ ಸ್ವಚ್ಛ ಭಾರತ ಅಭಿಯಾನದ 10 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ರೋಣ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ  ಇಂದಿನಿಂದ ಅಕ್ಟೋಬರ್ 2 , ರವರಗೆ ಆಚರಿಸಲಾಗುತ್ತಿದ್ದು ಜೊತೆಗೆ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಮಹಾತ್ಮಾ ಗಾಂಧೀಜಿ ಅವರು ಗ್ರಾಮ ಸ್ವರಾಜ್ಯದ ಮೂಲಕ ಹಳ್ಳಿಗಳ ಬೆಳವಣಿಗೆಗೆ ವಿಶೇಷ ಆಸಕ್ತಿ ಹೊಂದಿದ್ದರು. ದೇಶವನ್ನು ಎಲ್ಲಾ ರೀತಿಯಲ್ಲಿ ಸ್ವಚ್ಛವಾಗಿಡಲು ಅತ್ಯಂತ ಕಳಕಳಿ ಹೊಂದಿದ್ದರು ಈ ಹಿನ್ನೆಲೆ ಅವರಿಗೆ ಗ್ರಾಮವನ್ನು ಸ್ವಚ್ಚವಾಗಿಸುವ ಮೂಲ ಜನನ ಗೌರವ ಸಲ್ಲಿಸುವ ಕೆಲಸ ಮಾಡೋಣ ಎಂದರು..

ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ ಕಂದಕೂರ    ಗ್ರಾಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ  ನಿಮ್ಮ ಗ್ರಾಮಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ಹಾಗೂ ಗಲೀಜಿನಿಂದ ಗ್ರಾಮದಲ್ಲಿ ವಿವಿಧ ರೀತಿಯ ಕಾಯಿಲೆಗಳು ಬರುತ್ತವೆ ಈ ಹಿನ್ನೆಲೆ ಸ್ವಚ್ಚತೆಗೆ ಒತ್ತು ನೀಡಿ ಕಾಯಿಲೆಯಿಂದ ದೂರವಾಗುವದರ ಜೊತೆಗೆ ಆರೋಗ್ಯವಂತ ಹಾಗೂ ಸೌಂದರ್ಯವುಳ್ಳ ಗ್ರಾಮವನ್ನು ನಿಮ್ಮದಾಗಿಸಬಹುದು ಹಾಗಾಗಿ ಗ್ರಾಮಸ್ಥರು ದಯವಿಟ್ಟು ಸ್ವಚ್ಚತೆಗೆ ಆದ್ಯತೆ ನೀಡಿ ಎಂದು ಮನವಿ ಮಾಡಿದರು..

ಬಾಕ್ಸ್
ಹಿರೇಹಾಳ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ “ಸ್ವಚ್ಛತಾ ಹಿ ಸೇವಾ” ಆಂದೋಲನದ ಅಂಗವಾಗಿ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಂತರ ಮಕ್ಕಳ ಜೊತೆಗೂಡಿ ಗ್ರಾಮದ ಬೀದಿ ಬೀದಿಗಳಲ್ಲಿ ರ‌್ಯಾಲಿ ಮಾಡುವ ಮೂಲಕ ಜನರಲ್ಲಿ ವಿಶೇಷ ಜಾಗೃತಿ ಮೂಡಿಸಲಾಯಿತು..

ಬಾಕ್ಸ್ :-
ಹಿರೇಹಾಳ ಗ್ರಾಮದ ಬಸ ನಿಲ್ದಾಣದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಮಂಜುಳಾ ಹಕಾರಿ, ಸಹಾಯಕ ನಿರ್ದೇಶಕರಾದ. ಚಂದ್ರಶೇಖರ ಬಿ ಕಂದಕೂರ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ.ಎಸ್.ದಳವಾಯಿ ಸತಃ ತಾವೇ ಕಸಗೂಡಿಸಿ ಬಸ್ ನಿಲ್ದಾಣವನ್ನು ಸ್ವಚ್ಚಗೊಳಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು…

ಈ ಕಾರ್ಯಕ್ರಮ ದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರೇಣವ್ವ ಲಕ್ಕಪ್ಪ ಗುಡಿಮನಿ,  ಉಪಾಧ್ಯಕ್ಷರಾದ ನೀಲಪ್ಪ ವಿರಪ್ಪ ದಳಪತಿ, ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ.ಎಸ್ ದಳವಾಯಿ , ಗ್ರಾಮದ ಸ್ವಚ್ಛ ಗಾಯಿಗಳು, ಆಶಾ ಕಾರ್ಯಕರ್ತರು,ತಾಲೂಕ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಶಾಲೆಯ ಮಕ್ಕಳು ಹಾಜರಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…