More

    ವಸತಿ ಶಾಲೆಗಳ ಪ್ರವೇಶಾತಿ ಪರೀಕ್ಷೆ ವೀಕ್ಷಕರ, ಮಾರ್ಗಾಧಿಕಾರಿಗಳ ಮತ್ತು ತ್ರಿಸದಸ್ಯ ಸಮಿತಿ ನೇಮಕ

    ಗದಗ:  ಫೆಬ್ರುವರಿ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಸಂಘದ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಡಾ. ಬಿ.ಆರ್. ಅಂಬೇಡ್ಕರ್ / ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾ ಗಾಂಧಿ/ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಲಭ್ಯವಾಗುವ ಸೀಟುಗಳಿಗೆ ಪರೀಕ್ಷೆಗಳನ್ನು ಜರುಗಿಸಲಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷೆಗಳಿದ್ದು ಪರೀಕ್ಷೆಗಳು ಸುಗಮವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ  ವೀಕ್ಷಕರನ್ನು, ಮಾರ್ಗಾಧಿಕಾರಿಗಳ ಹಾಗೂ ತ್ರಿ ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

    ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆ ಜಾರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಸಂಘದ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಏಕಲವ್ಯ, ಮಾದರಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಲಭ್ಯವಿರುವ ಸೀಟುಗಳಿಗೆ  ಪರೀಕ್ಷೆಯನ್ನು  ಫೆಬ್ರವರಿ 18 ರಂದು ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದುಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು,ಶಾಂತಿ  ಸುವ್ಯವಸ್ಥಿತೆ ಕಾಪಾಡುವ ಹಿತದೃಷ್ಟಿಯಿಂದ ಫೆಬ್ರವರಿ 18  ರಂದು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆ.11.00 ಗಂಟೆಯಿಂದ ಮದ್ಯಾಹ್ನ 1:00 ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

    ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು.ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ,ಬುಕ್ ಸ್ಟಾಲ್,ಪೆÇೀಟೋ ಕಾಪಿಯರ್‍ಗಳನ್ನು ಬಂದ ಮಾಡಲು ಆದೇಶಿಸಿದೆ.ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಪೆÇೀನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts