More

    ಕಿತ್ತೂರು ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಗದಗ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಂದ, ಕಲೆ, ಸಾಹಿತ್ಯ, ಕ್ರೀಡೆ, ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ  ಮಹಿಳೆಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿಗಳನ್ನು ನೀಡಲಾಗುವುದು. ಮಹಿಳಾ ಅಭಿವೃದ್ದಿ/ ಕಲ್ಯಾಣ ಕ್ಷೇತ್ರ ಹಾಗೂ ಕ್ಲೀಷ್ಠಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿಯನ್ನು ಸಹ ನೀಡಲಾಗುವುದು.

    ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಸಂಸ್ಥೆಗಳು ಕಿತ್ತೂರು ಚೆನ್ನಮ್ಮ ಪ್ರಶಸ್ತಿಗೆ ಹಾಗೂ ಇತರೆ ಐದು ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಮಹಿಳೆಯರು ಕಿತ್ತೂರ ಚೆನ್ನಮ್ಮ ಪ್ರಶಸ್ತಿಗೆ ಹಾಗೂ ವೀರ ಮಹಿಳೆ ಪ್ರಶಸ್ತಿಗೆ ಅರ್ಹರಿರುವ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

    ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃಧ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃಧ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡಾ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲೂ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ. ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬಂಧಿಸಿದಂತೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಪ್ರಶಸ್ತಿ ಪ್ರಧಾನವನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಪ್ರಶಸ್ತಿಗೆ ಆಯ್ಕೆಯಾದ ವ್ಯಕ್ತಿಗಳು ಪ್ರಶಸ್ತಿಗಳನ್ನು ಖುದ್ದಾಗಿ ಪಡೆಯಬೇಕು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು ಸಂಘದ ಪದಾಧಿಕಾರಿಗಳು ಸ್ವೀಕರಿಸಬಹುದಾಗಿದೆ.

    ವೀರಮಹಿಳೆ ಪ್ರಶಸ್ತಿಗೆ 18 ರಿಂದ 45 ವಯೋಮಿತಿಯೊಳಗಿನ ಒಬ್ಬ ಮಹಿಳೆಯು ಆಪತ್ಕಾಲದಲ್ಲಿರುವ ಮತ್ತೊಬ್ಬ ವ್ಯಕ್ತಿಯ ಜೀವ ಕಾಪಾಡುವಲ್ಲಿ ಅಥವಾ ಪ್ರಾಣ ರಕ್ಷಿಸುವಲ್ಲಿ ತನ್ನ ಜೀವದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಧೈರ್ಯ, ಸಾಹಸದೊಂದಿಗೆ ಅಪಾಯದಲ್ಲಿರುವ ವ್ಯಕ್ತಿಯ ಜೀವ ಕಾಪಾಡುವಂತಹ ಕಾರ್ಯವನ್ನು ಮಾಡಿದಲ್ಲಿ ಅಂತಹ ಮಹಿಳೆಯರನ್ನು ವೀರ ಮಹಿಳೆ ಎಂದು ಪರಿಗಣಿಸಲಾಗುವುದು. ವೀರ ಮಹಿಳೆ ಪ್ರಶಸ್ತಿ ಪಡೆಯುವ ಮಹಿಳೆಯು ಶೌರ್ಯ ಹಾಗೂ ಸಾಧನೆಯನ್ನು ಮಾಡಿರಬೇಕು.  ಈ ಸಾಧನೆಯು ಸಾರ್ವಜನಿಕ ಗಮನಕ್ಕೆ ಬಂದಿರಬೇಕು. ಹಾಗೂ ಈ ಸಾಧನೆಯು ಪ್ರಶಸ್ತಿ ಪಡೆಯುವ ಹಿಂದಿನ ವರ್ಷದ ಜನವರಿ 2022 ರಿಂದ ಡಿಸೆಂಬರ್ 2022 ಒಳಗೆ ಇರಬೇಕು. ಈ ಪ್ರಶಸ್ತಿ ಸಂಬಂಧಿಸಿದ ಮಹಿಳೆಯ ತಂದೆ/ತಾಯಿ/ಪೋಷಕರು ಅರ್ಜಿಯನ್ನು ಸಲ್ಲಿಸಬಹುದು.  ವೀರ ಮಹಿಳೆ ಪ್ರಶಸ್ತಿಗಾಗಿ ರಾಜ್ಯ ವತಿಯಿಂದ ಒಬ್ಬ ಮಹಿಳೆಗೆ ಮಾತ್ರ ರೂ. 25000.00 ಗಳ ನಗದು ಹಾಗೂ ಪ್ರಶಸ್ತಿ ಪತ್ರ  ನೀಡಲಾಗುವುದು. ಇದನ್ನು ಪ್ರತೀ ವರ್ಷ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೀಡಲಾಗುವುದು.

    ಅರ್ಹ ಸಂಸ್ಥೆಗಳು ಹಾಗೂ ಅರ್ಹ ವ್ಯಕ್ತಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 006 , ಜಿಲ್ಲಾ ಆಡಳಿತ ಭವನ, ಹುಬ್ಬಳ್ಳಿ ರಸ್ತೆ ಗದಗ ಮತ್ತು ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಇವರಿಂದ ನಿಗದಿತ ನಮೂನೆಗಳನ್ನು ಹಾಗೂ ಷರತ್ತುಗಳ ಪ್ರತಿಗಳನ್ನು ಪಡೆದು ಜನವೆರಿ 10 ರೊಳಗಾಗಿ ಅಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts