ದೇಸೀ ಆಟ ಉಳಿಸಿ ಬೆಳೆಸೋಣ : ಸಂಗಮೇಶ ಬಬಲೇಶ್ವರ

blank

ಗದಗ : ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳ ರಕ್ಷಣೆ ಕಾರ್ಯವು ಕೇವಲ ಒಂದು ಇಲಾಖೆಗೆ ಮಾತ್ರ ಸೀಮಿತವಾಗಿರದೇ ಎಲ್ಲ ಇಲಾಖೆಗಳ ಜವಾಬ್ದಾರಿಯು ಕೂಡ ಆಗಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಹಾಗೂ ದೇಸಿ ಆಟ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹವನ್ನು ತಡೆಗಟ್ಟುವ ಜವಾಬ್ದಾರಿಯು ಗ್ರಾಮ ಮಟ್ಟದ ಅಧಿಕಾರಿಗಳಿಂದ ಹಿಡಿದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳವರೆಗೆ ಇರುತ್ತದೆ. ಶಿಕ್ಷಣ ಇಲಾಖೆಯವರು ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ನಿಗಾ ವಹಿಸಬೇಕು. ಈ ಕುರಿತು ಪ್ರತಿ ತಿಂಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಬಾಲ ಮಂದಿರದಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬವಾಗಬಾರದು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಮಾದಕ ವ್ಯಸನಿಗಳಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಪೊಲೀಸ ಇಲಾಖೆಯವರು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಿಗೆ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ದೇಸಿ ಆಟಗಳು : ದೇಸಿ ಆಟಗಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸುವುದು ಅವಶ್ಯಕವಾಗಿದೆ. ಆದಕಾರಣ ಇಂದಿನ ಮಕ್ಕಳಿಗೆ ದೇಸಿ ಆಟಗಳನ್ನು ಆಡಲು ಪ್ರೋತ್ಸಾಹಿಸುವುದು ಮುಖ್ಯವಾಗಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರೊಂದಿಗೆ ಸಮಾಲೋಚಿಸಿ ದೇಸಿ ಆಟಗಳ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಸಂಘಟಿಸಲಾಗುವುದು ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿ ಮಕ್ಕಳ ರಕ್ಷಣೆಗೆ ಸಮಾಜದ ಪ್ರತಿಯೊಬ್ಬರೂ ಶ್ರಮಿಸಬೇಕಾಗಿದೆ. ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಿ ಆಗುವ ಬದಲಾವಣೆ ಕುರಿತು ತಿಳುವಳಿಕೆ ನೀಡಬೇಕು. ಈ ಜಿಲ್ಲೆಯಲ್ಲಿ ದೇಸಿ ಆಟಗಳ ಕಾರ್ಯಕ್ರಮವನ್ನು ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ಇದು ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿ. ದೇಸಿ ಆಟಗಳಲ್ಲಿ ಮಕ್ಕಳನ್ನು ತೊಡಗಿಸುವಂತೆ ಮಾಡುವುದು ಹಾಗೂ ದೇಸಿ ಆಟಗಳಲ್ಲಿ ಸ್ಪರ್ಧಾ ಮನೋಭಾವ ಹೆಚ್ಚಿಸುವುದು ಮುಖ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ದೇಸಿ ಆಟಗಳ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ವಿವಿಧ ಇಲಾಖೆಯ ಸಹಯೋಗದೊಂದಿಗೆ ವ್ಯವಸ್ಥಿತವಾಗಿ ಮಾಡಲಾಗುವುದು. ದೇಸಿ ಆಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿಎಸ್‌ಪಿ ಇನಾಮದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ನಿರೂಪಣಾಧಿಕಾರಿ ರಾಧಾ ಮಣ್ಣೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆ ಅಧಿಕಾರಿ ಶರಣು ಗೋಗೇರಿ, ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ , ಸಿಡಿಪಿಓಗಳು, ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಬಾಲ ವಿಕಾಸ ಅಕಾಡೆಮಿ ಯೋಜನಾಧಿಕಾರಿ ಶ್ರೀಮತಿ ಭಾರತಿ ಶೆಟ್ಟರ ಸರ್ವರನ್ನು ಸ್ವಾಗತಿಸಿ ವಂದಿಸಿದರು.
TAGGED:
Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…