ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಸಭೆ

blank

ಸಕಾಲ ಅರ್ಜಿಗಳ ವಿಲೇವಾರಿ ತೃಪ್ತಿದಾಯಕವಿರಲಿ: ಗೋವಿಂದರೆಡ್ಡಿ 

ಗದಗ: ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಮೊದಲಿಗಿದ್ದ ಸ್ಥಾನವನ್ನು ಪುನಃ ಪಡೆದು ಉತ್ತಮ ಪ್ರಗತಿ ಸಾಧಿಸಲು ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಸಮಯದಲ್ಲಿಯೇ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಮೊದಲು ಗದಗ ಜಿಲ್ಲೆಯೂ ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ 6 ನೇ ಸ್ಥಾನವನ್ನು ಪಡೆದಿತ್ತು,ಈಗ 13 ನೇ ಸ್ಥಾನದಲ್ಲಿರುವುದು ತೃಪ್ತಿಕರವಿಲ್ಲ,ಮೊದಲಿಗಿದ್ದ ಉತ್ತಮ ಸ್ಥಾನವನ್ನು ಪುನಃ ಪಡೆಯಲು ಅಧಿಕಾರಿಗಳು ಸಕಾಲ ಯೋಜನೆ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು. ಈ ಕುರಿತು ನಿರ್ಲಕ್ಷö್ಯ ಮಾಡಬಾರದು ಎಂದು ಸಲಹೆ ಮಾಡಿದರು.

ಪ್ರತಿದಿನ ಅಧಿಕಾರಿಗಳು ಕಚೇರಿಯಲ್ಲಿ ಸಕಾಲ ನಿರ್ವಹಿಸುವ ಕೆಲಸಗಾರರೊಂದಿಗೆ ಚರ್ಚಿಸುವ ಮೂಲಕ ಸಕಾಲ ಅರ್ಜಿಗಳ ವಿಲೇವಾರಿಗೆ ಆದ್ಯತೆ ವಹಿಸಬೇಕು. ಜಿಲ್ಲೆಯು ಸಕಾಲ ಯೋಜನೆಯಡಿ ಉತ್ತಮ ಪ್ರಗತಿಯ ಹಂತದಲ್ಲಿರುವAತೆ ನೋಡಿಕೊಳ್ಳುವುದು ಪ್ರತಿ ಅಧಿಕಾರಿಗಳ ಜವಾಬ್ದಾರಿ ಎಂದರಿತು ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ವಿನಾಕಾರಣ ತಿರಸ್ಕಾರ ಮಾಡಬಾರದು ಹಾಗೂ ಸ್ವೀಕರಿಸಿದ ಅರ್ಜಿಗಳಿಗೆ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಕಾಲದಲ್ಲಿ ಅರ್ಜಿಗಳ ವಿಲೇವಾರಿ ಸಮರ್ಪಕ ಕೆಲಸ ನಿರ್ವಹಣೆಯಾಗದಿದ್ದರೆ ಸಂಬAಧಿಸಿದ ಅಧಿಕಾರಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಕಾಲ ಯೋಜನೆಯ ಯಶಸ್ವಿಗಾಗಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಸಕಾಲ ನೋಡಲ್ ಅಧಿಕಾರಿಗಳು ಮಾತನಾಡಿ ಅಕ್ಟೊಬರ್ 2024ರ ಮಾಹೆಯಲ್ಲಿ ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ 55158 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. 4175 ಅರ್ಜಿಗಳು ತಿರಸ್ಕೃತಗೊಂಡಿದ್ದು 1494 ಅರ್ಜಿಗಳನ್ನು ನಿಗದಿತ ಅವಧಿ ಮೀರಿದ ನಂತರ ವಿಲೇವಾರಿ ಮಾಡಲಾಗಿದೆ ಎಂದು ಸಕಾಲಕ್ಕೆ ಸಂಬAಧಿಸಿದAತೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸAಕದ,ಜAಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೆರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

TAGGED:
Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…