ವಿಜಯವಾಣಿ ಸುದ್ದಿಜಾಲ ಗದಗ
ಬಡ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳು ಹಾಗೂ ಇನ್ನಿತರ ಕಾರ್ಯಕ್ರಮಗಳಿಗಾಗಿ ನಿಮಿರ್ಸಿರುವ ಶಾದಿ ಮಹಲ್ (ಸಮುದಾಯ ಭವನ) ಗಳನ್ನು ಹಲವು ಖಾಸಗಿ ಸಂಸ್ಥೆಗಳು ಸಮುದಾಯ ಭವನಗಳ ಬಾಡಿಗೆ ಹೆಸರಲ್ಲಿ ಹಗಲು ದರೋಡೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಕಡಿವಾಣ ಹಾಕಲು ಸಂರ್ಪೂಣ ವಿಫಲರಾಗಿದ್ದಾರೆ. ಬಡವರ ಶಾದಿ ಮಹಲ್ ಗಳುಖಾಸಗಿ ವ್ಯಕ್ತಿಗಳ ಕೈಗೊಂಬೆಯಾಗಿವೆ ಎಂದು ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಮಾನ್ವಿ ಹೇಳಿದರು.
ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮುದಾಯ ಭವನ ರ್ದುಬಳಕೆ ಕುರಿತು ಹೋರಾಟ ನಡೆಸಲಾಗುವುದು. ಸರ್ಕಾರ ಅನುದಾನ ಪಡೆದು ನಿಮಿರ್ಸಲಾಗಿರುವ ಶಾದಿ ಮಹಲ, ಸಮುದಾಯ ಭವನಗಳು ಬಡ ಅಲ್ಪಸಂಖ್ಯಾತ ಕುಟುಂಬಗಳ ಮದುವೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಕೈಗೆಟ್ಟುವ ದರದಲ್ಲಿ ಸಿಗುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬಾಡಿಗೆ ನಿಯಂತ್ರಣ ಸಮಿತಿ ರಚನೆ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಾಮಾಜಿಕ ಭದ್ರತೆಗಾಗಿ ಹಾಗೂ ವಿಶೇಷವಾಗಿ ಶೈಕ್ಷಣಿಕ್ಕಾಗಿ ಸಾಕಷ್ಟು ಯೋಜನೆ ಜಾರಿಗೆ ತಂದು ಅದರ ಅನುಷ್ಠಾನಕ್ಕಾಗಿ ಕೊಟ್ಯಾಂತರ ಅನುದಾನ ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಮತ್ತು ವಕ್ಫ ಬೋರ್ಡ ಮೂಲಕ ಸಮುದಾಐದ ಅಭಿವೃದ್ಧಿಗಾಗಿ ಅನೇಕ ಯೋಜನೆ ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಹೋರಾಟ ಸಮಿತಿಯ ಉಪಾಧ್ಯಕ್ಷ ಅಬ್ದುಲಕರೀಮ ಬಳಗಾನೂರ, ಕಾರ್ಯದಶಿರ್ ಇಬ್ರಾಹಿಂ ಹಳ್ಳಿಕೇರಿ, ಸಮಿತಿ ಮುಖಂಡ ಮಹ್ಮದರಫೀಕ ಮದ್ಲಿವಾಲೆ, ಮೆಹಬೂಬಸಾಬ ಬಳ್ಳಾರಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಬಾಬುಸಾಬ ಅಗಡಿ, ಖಾಜಾಸಾಬ ಇಸ್ಮಾಯಿಲನವರ, ಮಕ್ತುಮಸಾಬ ಮುಲ್ಲಾನವರ ಇದ್ದರು.