More

    ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆಯ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ

    ಗದಗ: ಏಪ್ರಿಲ್​ 19ರಂದು ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಏಪ್ರಿಲ್​ 19ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಐವರು ಆರೋಪಿಗಳು ಕರತ್ಯ ಎಸಗಿ ಪರಾರಿಯಾಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ಐದು ತಂಡ ರಚಿಸಿ ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

    ಇದನ್ನೂ ಓದಿ: ಅಬಕಾರಿ ನೀತಿ ಹಗರಣ; ಮಾಜಿ ಎಐಎಸ್​ ಅಧಿಕಾರಿಯನ್ನು ಬಂಧಿಸಿದ ED

    ಕೌಟುಂಬಿಕ ಹಾಗೂ ವ್ಯವಹಾರಿಕ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.

    ಪ್ರಕರಣದ ಹಿನ್ನೆಲೆ

    ಗದಗ ಉರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಮನೆಯಲ್ಲಿ ಏಪ್ರಿಲ್​ 19ರಂದು ಮಲಗಿದ್ದಲ್ಲೇ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಸುನಂದಾ ಅವರ ಪುತ್ರ ಕಾರ್ತಿಕ್​ ಮದುವೆ ನಿಗದಿಪಡಿಸುವ ಸಂಬಂಧ ಕೊಪ್ಪಳದಿಂದ ಸಂಬಂಧಿಕರು ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts