More

    ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ

    ಗದಗ: ಭ್ರೂಣಲಿಂಗ ಪತ್ತೆ ಮಾಡುವ ಹಾಗೂ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಉಲ್ಲಂಘನೆಯಾಗದಂತೆ  ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್‍ಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೂಚನೇ ನೀಡಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದಲ್ಲಿ ಶನಿವಾರದಂದು ಜರುಗಿದ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹೊಸದಾಗಿ ಸ್ಕ್ಯಾನ ಮಶೀನಗಳನ್ನು ನೋಂದಾಯಿಸಲು ಆಗಮಿಸಿದ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕುಲಂಕೂಷವಾಗಿ ಪರಿಶೀಲಿಸುವಂತೆ ತಿಳಿಸಿದರು.  ಸ್ಕ್ಯಾನ್ ಸೆಂಟರಗಳಲ್ಲಿ ಹೊರ ಜಿಲ್ಲೆಯಿಂದ ಆಗಮಿಸಿ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರುಗಳು ವಿರುದ್ಧ ಕ್ರಮ ಕೈಗೊಳ್ಳಬೇಕು.  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನ ಸೆಂಟರುಗಳ ಮುಖ್ಯಸ್ಥರೊಂದಿಗೆ ಸಭೆಗಳನ್ನು ಆಯೋಜಿಸಿ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಕುರಿತು ಸಲಹೆ ಸೂಚನೇಗಳನ್ನು ನೀಡಲು ತಿಳಿಸಿದರು.
    ಜಿಲ್ಲಾ ತಪಾಸಣ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಡಾ.ವಾಯ್.ಕೆ.ಭಜಂತ್ರಿ ಅವರು ಮಾತನಾಡಿ ಸ್ಕ್ಯಾನಿಂಗ್ ಸೆಂಟರ್‍ಗೆ ಬರುವ ರೋಗಿಗಳ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲಿಸಿ ಬೇಕು. ಸ್ಕ್ಯಾನ್ ಮಶೀನ್ ನ ಕುರಿತಾದ ದಾಖಲಾತಿಗಳನ್ನು ಸರಿಯಾಗಿ ಶೇಖರಿಸಿ ಪ್ರತಿ ತಿಂಗಳ 5 ನೇ ತಾರೀಖಿನೊಳಗೆ ವರದಿಯನ್ನು ಸಲ್ಲಿಸುವಂತೆ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಆಸ್ಪತ್ರೆ ರೇಡಿಯೋಲಾಜಿಸ್ಟಗಳಾದ ಡಾ.ರಾಹುಲ್ ಶಿರೋಳ, ಡಾ. ವಿರೇಶ ಹಂಚಿನಾಳ, ಚಿಕ್ಕ ಮಕ್ಕಳ ತಜ್ಞರಾದ ಡಾ. ಶಿವನಗೌಡ, ವಕೀಲರಾದ ಆರ್.ಎಸ್.ವಡ್ರಳ್ಳಿ, ಸೇರಿದಂತೆ ವಿವಿಧ ಆಸ್ಪತ್ರೆ, ಸ್ಕ್ಯಾನ ಸೆಂಟರಗಳ ಮುಖ್ಯಸ್ಥರು ಉಪಸ್ಥಿತರಿದ್ದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts