ಶಿಕ್ಷಣ ಕ್ಷೇತ್ರದಲ್ಲಿ ಪ್ರೊ.ಪಟ್ಟಣಶೆಟ್ಟರು ಅದ್ಭುತ ಕ್ರಾಂತಿ ಮಾಡಿದ್ದಾರೆ : ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು 

blank
ಗದಗ : ತೋಂಟದಾರ್ಯ ವಿದ್ಯಾಪೀಠದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಭದ್ರಬುನಾದಿ ಹಾಕಿರುವ ಪ್ರೊ.ಎಸ್.ಎಸ್ ಪಟ್ಟಣಶೆಟ್ಟರು ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿ ಮಾಡಿದ್ದಾರೆ ಎಂದು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನುಡಿದರು.
ಅವರು ಇತ್ತೀಚೆಗೆ ಅಥಣಿಯ ಮೋಟಗಿಮಠದಲ್ಲಿ ಪೂಜ್ಯ ಲಿಂ.ಚನ್ನಬಸವ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಪ್ರೊ.ಎಸ್.ಎಸ್ ಪಟ್ಟಣಶೆಟ್ಟರಿಗೆ `ಸಮಾಜಸೇವಾಭೂಷಣ’ ಪ್ರಶಸ್ತಿ ಪ್ರದಾನ ಮಾಡಿ,
ಪಟ್ಟಣಶೆಟ್ಟರ ಶೈಕ್ಷಣಿಕ ಪ್ರೀತಿ ಹಾಗೂ ಸಾಮಾಜಿಕ ಕಳಕಳಿ ಅನನ್ಯವಾಗಿದ್ದು, ತೋಂಟದಾರ್ಯ ಮಠದ ಸಂಸ್ಥೆಗಳನ್ನು ಹೆಮ್ಮರವಾಗಿ ಬೆಳೆಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ನಿರಪೇಕ್ಷ ಭಾವದಿಂದ ನಿರಂತರ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶ್ರೀಯುತರು ತೋಂಟದಾರ್ಯ ಮಠಕ್ಕೆ ಸೇವೆ ಸಲ್ಲಿಸಿದ್ದು, ಇಂದು ತೋಂಟದಾರ್ಯ ವಿದ್ಯಾಪೀಠದ ಅಡಿಯಲ್ಲಿ ನಾಡಿನ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ೩೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಇದು ಹೆಮ್ಮೆಯ ವಿಷಯವಾಗಿದೆ ಎಂದರು.
ಪಟ್ಟಣಶೆಟ್ಟರೊಂದಿಗೆ ಸನ್ಮಾನ ಸ್ವೀಕರಿಸಿದ ಜಮಖಂಡಿ ಶಾಸಕರು ಹಾಗೂ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಸ್ಥಾಪಕರಾದ ಜಗದೀಶ ಗುಡಗುಂಟಿ ಹಾಗೂ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಅಜಿತ್ ಪ್ರಸಾದ್ ಅವರಿಗೂ ಸಮಾಜಸೇವಾ ಭೂಷಣ ಪ್ರಶಸ್ತಿ ಪ್ರದಾನ ಮಾಡಿರುವುದು ಅಭಿನಂದನೀಯ ಎಂದರು.
ಸಮಾರಂಭದ ನೇತೃತ್ವವನ್ನು ಮೋಟಗಿಮಠದ ಪ್ರಭು ಚೆನ್ನಬಸವ ಸ್ವಾಮೀಜಿ ವಹಿಸಿದ್ದರು. ಸಮಾರಂಭದಲ್ಲಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಶಿವರಾಜ ಪಾಟೀಲ ಹಾಗೂ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ಸೋಮಶೇಖರ, ಅಂತಾರಾಷ್ಟ್ರೀಯ ಬಸವ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್.ಮಹದೇವಯ್ಯ ಹಾಗೂ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಸತೀಶ್ ಜಾರಕಿಹೊಳಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಪೂಜ್ಯರಾದ ಶಿವಮೊಗ್ಗ ಜಿಲ್ಲೆಯ ಆನಂದಪುರ ಮಠದ ಜಗದ್ಗುರುಗಳು, ಹುಕ್ಕೇರಿ ಮಠದ ಶ್ರೀಗಳು, ನಾಗನೂರು ಮಠದ ಶ್ರೀಗಳು, ಶೇಗುಣಶಿ ಶ್ರೀಗಳು ಹಾಗೂ ಬಿಜಾಪೂರದ ಸಿದ್ಧಾರೂಢ ಸ್ವಾಮಿಗಳು, ವಿನಯ್ ಗುರೂಜಿ ಮುಂತಾದವರು ಸಮ್ಮುಖ ವಹಿಸಿದ್ದರು.
TAGGED:
Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…